ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಹೊಸದಾಗಿ 27,176 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನ ಸಂಖ್ಯೆ 3,33,16,755 ಕ್ಕೇರಿದೆ. ನಿನ್ನೆ 284 ಸೋಂಕಿತರು ಮೃತಪಟ್ಟಿದ್ದು, ಈವರೆಗೆ ವೈರಸ್ಗೆ 4,43,497 ಮಂದಿ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇಂದೂ ಇಳಿಕೆ ಕಂಡ ಕೊರೊನಾ ಪ್ರಕರಣ: 27,176 ಜನರಿಗೆ ಕೋವಿಡ್ ದೃಢ - India logs 27K fresh cases; 284 deaths
ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 27,176 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಕೋವಿಡ್ ಪ್ರಕರಣ
ಕಳೆದ 24 ಗಂಟೆಗಳಲ್ಲಿ 38,012 ಮಂದಿ ಗುಣಮುಖರಾಗಿದ್ದು, ಒಟ್ಟಾರೆ 3,25,22,171 ಜನರು ಚೇತರಿಸಿಕೊಂಡಿದ್ದಾರೆ. ಸೆಪ್ಟೆಂಬರ್ 14ರಂದು 61,15,690 ಕೋವಿಡ್ ಲಸಿಕಾ ಡೋಸ್ಗಳನ್ನು ನೀಡಲಾಗಿದ್ದು, ಒಟ್ಟಾರೆ 75,89,12,277 ವ್ಯಾಕ್ಸಿನ್ ಡೋಸ್ಗಳನ್ನು ಹಾಕಲಾಗಿದೆ.
Last Updated : Sep 15, 2021, 12:17 PM IST