ನವದೆಹಲಿ:ವ್ಯಾಕ್ಸಿನೇಷನ್ ನಡುವೆಯೂ ಕೋವಿಡ್ ಅಲೆಯಲ್ಲಿ ತತ್ತರಿಸಿರುವ ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3,68,147 ಸೋಂಕಿತರು ಪತ್ತೆಯಾಗಿದ್ದಾರೆ. 3,417 ಜನರು ಅಸುನೀಗಿದ್ದಾರೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
2 ಕೋಟಿ ಗಡಿಯತ್ತ ಸೋಂಕಿತರ ಸಂಖ್ಯೆ:
ದೇಶದಲ್ಲೀಗ ಕೊರೊನಾ ಪ್ರಕರಣಗಳ ಸಂಖ್ಯೆ 2 ಕೋಟಿ (1,99,25,604) ಗಡಿಯತ್ತ ಸಾಗಿದ್ದು, ಈವರೆಗೆ ಎರಡು ಲಕ್ಷಕ್ಕೂ ಅಧಿಕ ಮಂದಿ (2,18,959) ಮಾರಕ ಸೋಂಕಿಗೆ ಬಲಿಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 34,13,642ಕ್ಕೆ ಏರಿಕೆಯಾಗಿದೆ.
ಒಂದೇ ದಿನ 3 ಲಕ್ಷ ಸೋಂಕಿತರು ಗುಣಮುಖ:
ಒಟ್ಟು 1,99,25,604 ಸೋಂಕಿತರ ಪೈಕಿ ಇಲ್ಲಿಯವರೆಗೆ 1,62,93, 003 ಜನರು ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಭಾನುವಾರ ಒಂದೇ ದಿನ 3,00,732 ಮಂದಿ ವೈರಸ್ನಿಂದ ಚೇತರಿಸಿಕೊಂಡಿದ್ದಾರೆ.
15.71 ಕೋಟಿ ಮಂದಿಗೆ ಲಸಿಕೆ:
ಜನವರಿ 16 ರಿಂದ ದೇಶದಲ್ಲಿ ಲಸಿಕಾ ಅಭಿಯಾನ ಆರಂಭವಾಗಿದ್ದು, ಈವರೆಗೆ ಒಟ್ಟು 15,71,98,207 ಮಂದಿ ವ್ಯಾಕ್ಸಿನ್ ಪಡೆದಿದ್ದಾರೆ. ಲಸಿಕೆ ಅಭಾವದ ನಡುವೆಯೂ ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಪ್ರಾರಂಭಿಸಲಾಗಿದೆ. ಅನೇಕ ರಾಜ್ಯಗಳಲ್ಲಿ ಲಸಿಕೆ ಕೊರತೆಯಿಂದಾಗಿ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಷನ್ ಆರಂಭವಾಗಿಲ್ಲ.