ಭೋಪಾಲ್: ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಅಥವಾ ಸೋಮವಾರದಿಂದ ಭೋಪಾಲ್ ಮತ್ತು ಇಂದೋರ್ನಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಭೋಪಾಲ್, ಇಂದೋರ್ನಲ್ಲಿ ನೈಟ್ ಕರ್ಫ್ಯೂ ಜಾರಿ: ಶಿವರಾಜ್ ಸಿಂಗ್
ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕಾರಣ ಭೋಪಾಲ್ ಮತ್ತು ಇಂದೋರ್ನಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ರಾಜ್ಯದ ಕೊರೊನಾ ಪರಿಸ್ಥಿತಿ ಕುರಿತು ನಿನ್ನೆ ಪರಿಶೀಲನೆ ಸಭೆ ನಡೆಸಲಾಗಿದ್ದು, ಈ ವೇಳೆ ನೈಟ್ ಕರ್ಫ್ಯೂ ಜಾರಿ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಜೊತೆಗೆ ಮಹಾರಾಷ್ಟ್ರದಲ್ಲಿ ಸಹ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಹಾಗೂ ಪ್ರತಿಯೊಬ್ಬರಿಗೂ ಥರ್ಮಲ್ಸ್ಕ್ಯಾನಿಂಗ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಪ್ರತಿಯೊಬ್ಬರು ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕೆಂದು ಚೌಹಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಿನ್ನೆ ಮಧ್ಯಪ್ರದೇಶದಲ್ಲಿ 603 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಇಂದೋರ್ನಲ್ಲಿ 219 ಹಾಗೂ ಭೋಪಾಲ್ನಲ್ಲಿ 138 ಹೊಸ ಪ್ರಕರಣಗಳು ದೃಢಪಟ್ಟಿವೆ.