ನವದೆಹಲಿ: ಕೋವಿಡ್-19ನಿಂದ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾದ 18 ವರ್ಷದೊಳಗಿನ ಮಕ್ಕಳ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು 5 ಲಕ್ಷ ರೂಪಾಯಿಗಳ ಉಚಿತ ಆರೋಗ್ಯ ವಿಮೆ ನೀಡಲು ನಿರ್ಧರಿಸಿದೆ. ಪ್ರಧಾನಮಂತ್ರಿ ನಾಗರಿಕ ನೆರವು ಮತ್ತು ತುರ್ತು ಪರಿಸ್ಥಿತಿಗಳ ನಿಧಿಯಿಂದ ಪ್ರೀಮಿಯಂ ಪಾವತಿಸಲಾಗುವುದು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ಕೋವಿಡ್-19ನಿಂದ ಬಾಧಿತರಾದ ಮಕ್ಕಳಿಗೆ ಸಹಾಯವಾಗಲು ತೆಗೆದುಕೊಂಡ ಕ್ರಮಗಳ ಭಾಗವಾಗಿ, 18 ವರ್ಷದೊಳಗಿನ ಮಕ್ಕಳಿಗೆ ಆಯುಷ್ಮಾನ್ ಭಾರತ್ ಅಡಿಯಲ್ಲಿ 5 ಲಕ್ಷ ರೂಪಾಯಿಗಳ ಉಚಿತ ಆರೋಗ್ಯ ವಿಮೆ ನೀಡಲಾಗುವುದು ಮತ್ತು ಅದರ ಪ್ರೀಮಿಯಂ ಅನ್ನು ಪಿಎಂ ಕೇರ್ಸ್ ಪಾವತಿಸಲಿದೆ ಎಂದು ಠಾಕೂರ್ ಟ್ವೀಟ್ ಮಾಡಿದ್ದಾರೆ.