ಚಂಡೀಗಢ (ಪಂಜಾಬ್):ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಶೈಕ್ಷಣಿಕ ಸಂಸ್ಥೆಗಳನ್ನು ಮಾರ್ಚ್ 31 ರವರೆಗೆ ಮುಚ್ಚುವುದಾಗಿ ಪಂಜಾಬ್ ಸರ್ಕಾರ ಘೋಷಿಸಿದೆ.
ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಈ ಆದೇಶ ನೀಡಿದ್ದು, ಎಲ್ಲಾ ತರಗತಿಗಳ ಪರೀಕ್ಷೆಗಳನ್ನು ಸಹ ಮುಂದೂಡಲಾಗುವುದು. ಮಾರ್ಚ್ 31ರ ಒಳಗಾಗಿ ಹೊಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ಪರಿಸ್ಥಿತಿಗೆ ಅನುಗುಣವಾಗಿ ಪರೀಕ್ಷೆಯ ವಿಧಾನವನ್ನು ನಿರ್ಧರಿಸುತ್ತೇವೆ ಎಂದು ಶಿಕ್ಷಣ ಸಚಿವ ವಿಜಯ್ ಇಂದರ್ ಸಿಂಗ್ಲಾ ತಿಳಿಸಿದ್ದಾರೆ.