ಕರ್ನಾಟಕ

karnataka

ETV Bharat / bharat

ಭಾರತದಲ್ಲಿ 2,151 ಕೋವಿಡ್ ಕೇಸ್​ ಪತ್ತೆ: ಇದು 5 ತಿಂಗಳಲ್ಲೇ ಅತಿ ಹೆಚ್ಚು

ದೇಶದಲ್ಲಿ ಮಂಗಳವಾರ 2 ಸಾವಿರಕ್ಕೂ ಹೆಚ್ಚು ಹೊಸ ಕೋವಿಡ್​ ಪ್ರಕರಣಗಳು ದಾಖಲಾಗಿವೆ. ಇದು ಐದು ತಿಂಗಳಲ್ಲೇ ಅತಿ ಹೆಚ್ಚು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

covid 19 update
ಸಾಂದರ್ಭಿಕ ಚಿತ್ರ

By

Published : Mar 29, 2023, 11:19 AM IST

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,151 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 11,903ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಿಂದ ತಿಳಿದು ಬಂದಿದೆ.

ದಿನದ ಪಾಸಿಟಿವಿಟಿ ದರ ಶೇ. 1.51 ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 1.53 ಆಗಿದೆ. 24 ಗಂಟೆಗಳಲ್ಲಿ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ತಲಾ ಮೂವರು, ಕರ್ನಾಟಕದಲ್ಲಿ ಒಬ್ಬರು ಸೇರಿ ಒಟ್ಟು 7 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೋವಿಡ್‌ನಿಂದ ಈವರೆಗಿನ ಮೃತರ ಒಟ್ಟು ಸಂಖ್ಯೆ 5,30,848ಕ್ಕೆ ಏರಿದೆ. ಇಲ್ಲಿಯವರೆಗೆ ದೇಶದಾದ್ಯಂತ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4.47 ಕೋಟಿ (4,47,09,676) ದಾಖಲಾಗಿದೆ. ರಾಷ್ಟ್ರೀಯ ಕೋವಿಡ್ ಚೇತರಿಕೆಯ ಪ್ರಮಾಣ ಶೇ 98.78 ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಲಸಿಕೆ ಪಡೆಯಲು WHO ಶಿಫಾರಸು: ಏತನ್ಮಧ್ಯೆ, ವಿಶ್ವ ಆರೋಗ್ಯ ಸಂಸ್ಥೆ(WHO) ಮಂಗಳವಾರ ಕೋವಿಡ್​ ಲಸಿಕೆಗಳಿಗಾಗಿ ತನ್ನ ಶಿಫಾರಸುಗಳನ್ನು ಬದಲಾಯಿಸಿದೆ. ಹೆಚ್ಚಿನ ಅಪಾಯದ ಜನರು ಕೊನೆಯ ಬೂಸ್ಟರ್‌ ಲಸಿಕೆ ಪಡೆದ 12 ತಿಂಗಳ ನಂತರ ಹೆಚ್ಚುವರಿ ಲಸಿಕೆ ಪಡೆಯಬೇಕು ಎಂದು ಸೂಚಿಸಿದೆ. ಆರೋಗ್ಯ ಸಂಸ್ಥೆಯು ಹೆಚ್ಚಿನ ಅಪಾಯ ಹೊಂದಿರುವ ವೃದ್ಧರು ಮತ್ತು ವಯಸ್ಕರು ಲಸಿಕೆ ಪಡೆಯುವಂತೆ ಸೂಚಿಸಿದೆ.

ಭಾರತದಲ್ಲಿ 5 ತಿಂಗಳ ನಂತರ ಗರಿಷ್ಠ ಏರಿಕೆ: ದೇಶದಲ್ಲಿ ಔಷಧಿಗಳು, ವೈದ್ಯಕೀಯ ಉಪಕರಣಗಳು, ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳ ಮೇಲೆ ಮಾನವ ಸಂಪನ್ಮೂಲದ ಸಾಮರ್ಥ್ಯ ವೃದ್ಧಿ ಹಾಗೂ ಕೋವಿಡ್-19 ಮತ್ತು ಇನ್ಫ್ಲುಯೆನ್ಸ ವಿರುದ್ಧ ವ್ಯಾಕ್ಸಿನೇಷನ್ ಕವರೇಜ್ ಸೇರಿದಂತೆ ಆಸ್ಪತ್ರೆಯ ಸನ್ನದ್ಧತೆ ಮತ್ತು ಜಿಲ್ಲಾ ಮಟ್ಟದಲ್ಲಿ ಸಾಕಷ್ಟು ಮೂಲಸೌಕರ್ಯಗಳನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ದೇಶಾದ್ಯಂತ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆ, ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಸೋಮವಾರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಪ್ರಕರಣಗಳ ಏರಿಕೆಯ ದೃಷ್ಟಿಯಿಂದ ಸಾಂಕ್ರಾಮಿಕದ ಸಂಪೂರ್ಣ ನಿರ್ವಹಣೆಯ ಸ್ಥಿತಿಯನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಪರಿಶೀಲಿಸಿದ್ದಾರೆ. ಪರಿಶೀಲನಾ ಸಭೆಯಲ್ಲಿ ನೀತಿ (NITI) ಆಯೋಗದ ಸದಸ್ಯ (ಆರೋಗ್ಯ) ಡಾ.ವಿ.ಕೆ.ಪಾಲ್ ಮತ್ತು ಆರೋಗ್ಯ ಸಂಶೋಧನಾ ವಿಭಾಗದ ಕಾರ್ಯದರ್ಶಿ ಡಾ.ರಾಜೀವ್ ಬಹ್ಲ್ ಉಪಸ್ಥಿತರಿದ್ದರು.

22ನೇ ಮಾರ್ಚ್ 2023 ರಂದು ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಪ್ರಧಾನಿ ಮೋದಿಯವರ ಸಂದೇಶವನ್ನು ಕೇಂದ್ರ ಆರೋಗ್ಯ ಕಾರ್ಯದರ್ಶಿ ಉಲ್ಲೇಖಿಸಿದ್ದಾರೆ ಮತ್ತು ಕೋವಿಡ್-19 ನಿರ್ವಹಣೆಗೆ ಜಾಗರೂಕರಾಗಿರಲು ರಾಜ್ಯಗಳಿಗೆ ಸಲಹೆ ನೀಡಿದ್ದಾರೆ. ಮಾ. 25, 2023 ರಂದು ಆರೋಗ್ಯ ಸಂಶೋಧನೆ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೊರಡಿಸಿದ ಜಂಟಿ ಸಲಹೆಯಲ್ಲಿ ಪಟ್ಟಿ ಮಾಡಲಾದ ಆದ್ಯತೆಗಳನ್ನು ಅನುಸರಿಸಲು ಅವರಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ:ದೇಶದಲ್ಲಿ 1,573 ಕೋವಿಡ್‌ ಸೋಂಕಿತರು ಪತ್ತೆ: ನಾಲ್ವರು ಸಾವು

ABOUT THE AUTHOR

...view details