ನವದೆಹಲಿ:ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿರುವಂತೆ ಕೋವಿಡ್-19ರ ವಿರುದ್ಧ ಸೆಣಸಾಡಲು 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಹಾಕುವ ನೋಂದಣಿ ಇಂದಿನಿಂದ ಕೋ-ವಿನ್ ಪೋರ್ಟಲ್‌ನಲ್ಲಿ ಪ್ರಾರಂಭವಾಗಲಿದೆ.
ಎಲ್ಲ ಅರ್ಹ ನಾಗರಿಕರು COVID ಲಸಿಕೆಯನ್ನು ಖಚಿತಪಡಿಸಿಕೊಳ್ಳಲು ಸಿದ್ಧರಾಗೋಣ. 15-18 ವರ್ಷ ವಯಸ್ಸಿನ ಮಕ್ಕಳಿಗೆ #CoWIN ನಲ್ಲಿ ನೋಂದಣಿ ಜನವರಿ 1, 2022 ರಿಂದ ಪ್ರಾರಂಭವಾಗುತ್ತದೆ. #LargestVaccineDrive Unite2FightCorona ಎಂದು ಆರೋಗ್ಯ ಸಚಿವಾಲಯ ಟ್ವೀಟ್ ಮಾಡಿದೆ.
ಡಿಸೆಂಬರ್ 25 ರಂದು ಪ್ರಧಾನಿ ನರೇಂದ್ರ ಮೋದಿ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದರು. ಪ್ರಧಾನಿ ಅವರ ಈ ಘೋಷಣೆ ಹಿನ್ನೆಲೆಯಲ್ಲಿ ಸೋಮವಾರದಿಂದ ಮಕ್ಕಳಿಗೆ ಲಸಿಕೆ ಹಾಕುವ ಕೆಲಸ ಪ್ರಾರಂಭವಾಗಲಿದೆ. ಅಷ್ಟೇ ಅಲ್ಲ ಜನವರಿ 10 ರಿಂದ ಮೂರನೇ ಡೋಸ್ ಲಸಿಕೆ ನೀಡುವ ಕೆಲಸವೂ ಆರಂಭವಾಗಲಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.