ಜೈಪುರ (ರಾಜಸ್ಥಾನ):ಈ ವರ್ಷದ ಡಿಸೆಂಬರ್ ವೇಳೆಗೆ ದೇಶದ ಎಲ್ಲ ಜನರಿಗೂ ಕೊರೊನಾ ಲಸಿಕೆ ಲಭ್ಯವಾಗಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ.
ರಾಜಸ್ಥಾನದ ಕೋವಿಡ್ ಪರಿಸ್ಥಿತಿ ಪರಿಶೀಲಿಸಲು ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಹಾಗೂ ಪಕ್ಷದ ಸಂಸದರೊಂದಿಗೆ ವರ್ಚುವಲ್ ಸಭೆ ನಡೆಸಿ ಬಳಿಕ ಮಾತನಾಡಿದ ನಡ್ಡಾ, "ಭಾರತವು ಕೇವಲ 9 ತಿಂಗಳಲ್ಲಿ ಮೊದಲ ಬಾರಿಗೆ ಎರಡು ದೇಶೀಯ ಲಸಿಕೆಗಳನ್ನು ಅಭಿವೃದ್ಧಿಪಡಿಸಿದೆ. ಇದುವರೆಗೆ 18 ಕೋಟಿ ಭಾರತೀಯರಿಗೆ ವ್ಯಾಕ್ಸಿನ್ ನೀಡಲಾಗಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲರಿಗೂ ಲಸಿಕೆ ಲಭ್ಯವಾಗಲಿದೆ ಮತ್ತು ಅದರ ಕ್ಯಾಲೆಂಡರ್ ಅನ್ನು ನಿಗದಿಪಡಿಸಲಾಗಿದೆ" ಎಂದು ಹೇಳಿದರು.