ನವದೆಹಲಿ :ಸ್ಪುಟ್ನಿಕ್ ವಿ ಮತ್ತು ಸ್ಪುಟ್ನಿಕ್ ಲೈಟ್ ಕೋವಿಡ್-19 ಲಸಿಕೆಗಳನ್ನು ತಯಾರಿಸಲು ಮತ್ತು ಪೂರೈಸಲು ರಷ್ಯಾದ ನೇರ ಹೂಡಿಕೆ ನಿಧಿಯೊಂದಿಗೆ (ಆರ್‌ಡಿಐಎಫ್) ಒಪ್ಪಂದ ಮಾಡಿಕೊಂಡಿರುವುದಾಗಿ ಔಷಧ ತಯಾರಕ ವೋಕ್‌ಹಾರ್ಡ್ (Wockhardt) ಶುಕ್ರವಾರ ಹೇಳಿದೆ.
Enso ಹೆಲ್ತ್‌ಕೇರ್ ಆರ್‌ಡಿಐಎಫ್‌ನ ಸಮನ್ವಯ ಪಾಲುದಾರರಾದ ಸ್ಪುಟ್ನಿಕ್ ವಿ ಲಸಿಕೆಗಳನ್ನು ಭಾರತದಲ್ಲಿ ಪಡೆಯುವುದಕ್ಕಾಗಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. "ಸ್ಪುಟ್ನಿಕ್ ವಿ ಮತ್ತು ಸ್ಪುಟ್ನಿಕ್ ಲೈಟ್ ಲಸಿಕೆಗಳ ಜಾಗತಿಕ ಪೂರೈಕೆಗಾಗಿ ಆರ್‌ಡಿಐಎಫ್ ಜೊತೆ ಪಾಲುದಾರಿಕೆ ಹೊಂದಲು ನಮಗೆ ಸಂತೋಷವಾಗಿದೆ. ಇದು ವಾಣಿಜ್ಯ ಲಭ್ಯವಿರುವ ಅತ್ಯಂತ ಪರಿಣಾಮಕಾರಿ ಲಸಿಕೆಗಳಲ್ಲಿ ಒಂದಾಗಿದೆ" ಎಂದು ವೋಕ್‌ಹಾರ್ಡ್ ಗ್ರೂಪ್ ಸ್ಥಾಪಕ ಅಧ್ಯಕ್ಷ ಹಬಿಲ್ ಖೋರಕಿವಾಲಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.