ಲೂಧಿಯಾನ್(ಪಂಜಾಬ್):ದೇಶದ ಕೆಲವೊಂದು ರಾಜ್ಯಗಳಲ್ಲಿ ಕೊರೊನಾ ವೈರಸ್ ಹಾವಳಿ ಮಿತಿ ಮೀರಿದ್ದು, ಪ್ರತಿದಿನ ಅನೇಕರು ಸಾವನ್ನಪ್ಪುತ್ತಿದ್ದಾರೆ. ಪಂಜಾಬ್ನ ಲೂಧಿಯಾನ್ದಲ್ಲೂ ಅಂತಹ ಸ್ಥಿತಿ ನಿರ್ಮಾಣಗೊಂಡಿದೆ.
ಪಂಜಾಬ್ನಲ್ಲಿ ಕೋವಿಡ್ನಿಂದ ಅತಿ ಹೆಚ್ಚು ಸಂಕಷ್ಟಕ್ಕೊಳಗಾಗಿರುವ ಆರು ಜಿಲ್ಲೆಗಳ ಪೈಕಿ ಲೂಧಿಯಾನ್ ಕೂಡ ಒಂದಾಗಿದ್ದು, ಕಳೆದ 24 ಗಂಟೆಗಳಲ್ಲಿ 24 ಜನರು ಸಾವನ್ನಪ್ಪಿದ್ದಾರೆ. ಪ್ರತಿ ಗಂಟೆಗೂ ಕೋವಿಡ್ನಿಂದ ಓರ್ವ ಸಾವನ್ನಪ್ಪಿದ್ದಾನೆ.