ಲಖನೌ: ಉತ್ತರ ಪ್ರದೇಶದ ಆಸ್ಪತ್ರೆಯೊಂದರಲ್ಲಿ ಭೀಕರ ಎನ್ನಬಹುದಾದ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ 58 ವರ್ಷದ ಮಹಿಳೆವೋರ್ವರಿಗೆ ಸರಿಯಾಗಿ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಶವಾಗಾರದಲ್ಲಿ ರಕ್ತದ ಮಡುವಿನಲ್ಲಿ ಬಿದ್ದ ಕೊರೊನಾ ಪೀಡಿತೆ ಶವ ಅವರ ಶವವನ್ನ ಶವಾಗಾರಕ್ಕೆ ಸಾಗಿಸಲಾಗಿದೆಯಾದರೂ ಅದು ರಕ್ತಸಿಕ್ತವಾಗಿದೆ ಎನ್ನಲಾಗಿದೆ. ಲೋಕಬಂಧು ಆಸ್ಪತ್ರೆ ವೈದ್ಯರು ಚಿಕಿತ್ಸೆಯಲ್ಲಿ ಲೋಪ ಎಸೆಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತೀವ್ರ ಅನಾರೋಗ್ಯಕ್ಕೊಳಗಾಗಿದ್ದ ಮಹಿಳೆ ತಡರಾತ್ರಿ ಲಖನೌದ ಈ ಆಸ್ಪತ್ರೆಗೆ ಬಂದಿದ್ದಾರೆ. ಈ ವೇಳೆ ವೈದ್ಯರು ತಕ್ಷಣ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ವಹಿಸಿದ್ದರಿಂದ ಸಾವು ಸಂಭವಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಇದನ್ನೂ ಓದಿ: ಕೊರೊನಾ ಪೀಡಿತ ರಾಜ್ಯಗಳಲ್ಲಿ ಸಮರ್ಪಕ ಆಕ್ಸಿಜನ್ ಪೂರೈಕೆ ಪರಿಶೀಲಿಸಿದ ಪ್ರಧಾನಿ ಮೋದಿ
ಆದರೆ ವೈದ್ಯರು ಮಾತ್ರ ನಮ್ಮ ನಿರ್ಲಕ್ಷ್ಯದಿಂದ ಸಾವು ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಆಸ್ಪತ್ರೆ ನಿರ್ದೇಶಕ ಡಾ. ಅರುಣ್ ಲಾಲ್, ನಮ್ಮ ಮೇಲೆ ಬಂದಿರುವ ಹಾಗೂ ಮಾಡಲಾಗಿರುವ ಆರೋಪಗಳು ಆಧಾರ ರಹಿತ ಎಂದು ಹೇಳಿದ್ದಾರೆ. ಕುಟುಂಬ ಸದಸ್ಯರು ಹೇಳುವ ಪ್ರಕಾರ, ಉಸಿರಾಟದ ತೊಂದರೆ ಇರುವ ಹಿನ್ನೆಲೆಯಲ್ಲಿ ಅವರು ಅವಧ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪರಿಸ್ಥಿತಿ ಬಿಗಡಾಯಿಸಿದ್ದರಿಂದ ಅವರನ್ನ ಲಖನೌದ ಲೋಕಬಂಧು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದಿದ್ದಾರೆ.