ನವದೆಹಲಿ:ದೇಶದಲ್ಲಿ ಕಳೆದ 24 ಗಂಟೆಯಲ್ಲಿ 6,809 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಅವಧಿಯಲ್ಲಿ ಕೇರಳದಲ್ಲಿ ಐವರು ಸೇರಿದಂತೆ ದೇಶದಲ್ಲಿ ಒಟ್ಟು 26 ಸೊಂಕಿತರು ಸಾವನ್ನಪ್ಪಿದ್ದಾರೆ. ಈಗಿನ ದೈನಂದಿನ ಪಾಸಿಟಿವಿಟಿ ದರ ಶೇ.0.12 ರಷ್ಟಿದೆ. ಚೇತರಿಕೆ ಪ್ರಮಾಣ ಶೇ.98.69 ಇದೆ. ಸಕ್ರಿಯ ಸೋಂಕಿತರ ಸಂಖ್ಯೆ ದೇಶವ್ಯಾಪಿ ಇಳಿಕೆಯಾಗುತ್ತಿದೆ.
ದೇಶದಲ್ಲಿ 6 ಸಾವಿರ ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಸೋಂಕಿತರು ಇಳಿಕೆ - ಈಟಿವಿ ಭಾರತ್ ಕರ್ನಾಟಕ
ಭಾರತದಲ್ಲಿ ಇಂದು ಮುಂಜಾನೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಕೋವಿಡ್ ವರದಿ ಹೀಗಿದೆ.

ಹೊಸ ಕೋವಿಡ್ ಸೋಂಕು
ನಿನ್ನೆ 8,414 ಕೋವಿಡ್ ಚೇತರಿಸಿಕೊಂಡಿದ್ದಾರೆ. ಸಾವಿನ ಪ್ರಮಾಣ ಶೇ 1.19 ರಷ್ಟಿದೆ. ಆರೋಗ್ಯ ಸಚಿವಾಲಯದ ಪ್ರಕಾರ, ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನದಡಿಯಲ್ಲಿ ಇದುವರೆಗೆ 213.01 ಕೋಟಿ ಲಸಿಕೆಗಳನ್ನು ನೀಡಲಾಗಿದೆ.
ಇದನ್ನೂ ಓದಿ:ಕೋವಿಶೀಲ್ಡ್ ಲಸಿಕೆಯಿಂದ ಮಗಳ ಸಾವು.. ₹1000 ಕೋಟಿ ಪರಿಹಾರ ಕೋರಿ ಬಾಂಬೆ ಕೋರ್ಟ್ ಮೆಟ್ಟಿಲೇರಿದ ತಂದೆ