ನವದೆಹಲಿ:ದೇಶದಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ 5,910 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ಅವಧಿಯಲ್ಲಿ 16 ಜನರು ಮೃತಪಡ್ಡಿದ್ದಾರೆ. ಸದ್ಯ ಸಕ್ರಿಯ ಸೋಂಕು ಪ್ರಕರಣಗಳು 53,974 ಇವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.
ದೇಶದಲ್ಲಿ 5,910 ಹೊಸ ಕೋವಿಡ್ ಸೋಂಕಿತರು ಪತ್ತೆ: ಸಕ್ರಿಯ ಪ್ರಕರಣಗಳು ಇಳಿಕೆ - ಈಟಿವಿ ಭಾರತ್ ಕನ್ನಡ
ಕೋವಿಡ್ನಿಂದ ಗುಣಮುಖರಾಗುವವರ ಸಂಖ್ಯೆ ಹೆಚ್ಚುತ್ತಿದ್ದು ಸಕ್ರಿಯ ಸೋಂಕಿತ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ.
India today covid report
ಈಗಿನ ಕೋವಿಡ್ ಪಾಸಿಟಿವಿಟಿ ದರ ಶೇ.0.12, ಚೇತರಿಕೆ ಪ್ರಮಾಣ ಶೇ.98.69 ಇದೆ. ಸಾವಿನ ಪ್ರಮಾಣ ಶೇ 1.19 ರಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ದೇಶದಲ್ಲಿ ಇದುವರೆಗೆ 213.01 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.
ಇದನ್ನೂ ಓದಿ:ಸೈರಸ್ ಮಿಸ್ತ್ರಿ ರಸ್ತೆ ಅಪಘಾತ ಕೇಸ್: ಕಾರು ಚಲಾಯಿಸುತ್ತಿದ್ದ ವೈದ್ಯೆ, ಆಕ್ಸಿಡೆಂಟ್ಗೆ ಕಾರಣವೇನು ಗೊತ್ತಾ?