ಕರ್ನಾಟಕ

karnataka

ETV Bharat / bharat

ದೇಶದಲ್ಲಿ ಕೊರೊನಾದ ಆತಂಕಕಾರಿ ಬೆಳವಣಿಗೆ.. ಒಂದೇ ದಿನಕ್ಕೆ ಅರ್ಧ ಲಕ್ಷಕ್ಕೂ ಹೆಚ್ಚು ಕೇಸ್​ ದಾಖಲು!

ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಅರ್ಧ ಲಕ್ಷಕ್ಕೂ ಹೆಚ್ಚು ಕೋವಿಡ್​ ಪ್ರಕರಣಗಳು ದಾಖಲಾಗಿದ್ದು, ಕೊರೊನಾ ದೇಶಾದ್ಯಂತ ಆತಂಕ ಸೃಷ್ಟಿಸಿದೆ.

India logs over half lakh corona cases  India covid report,  India corona news,  India Covid surge  Maharashtra covid report  Karnataka Covid report
ದೇಶದಲ್ಲಿ ಕೊರೊನಾದ ಆತಂಕಕಾರಿ ಬೆಳವಣಿಗೆ

By

Published : Jan 5, 2022, 10:30 AM IST

ನವದೆಹಲಿ: ಕಳೆದ 24 ಗಂಟೆಗಳಲ್ಲಿ 58,097 ಹೊಸ ಸೋಂಕುಗಳು ಪತ್ತೆಯಾಗಿದ್ದು, 534 ಸಾವುಗಳು ದಾಖಲಾಗಿವೆ. ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ನಿತ್ಯ ಏರಿಕೆ ಕಾಣುತ್ತಿದೆ. ದಿನದ ಹಿಂದೆಯಷ್ಟೇ ವರದಿಯಾದ ಪ್ರಕರಣಗಳ ಸಂಖ್ಯೆಗಿಂತ ಇಂದು ಶೇ. 55ರಷ್ಟು ಹೆಚ್ಚಾಗಿದೆ. ದೇಶದಲ್ಲಿ ಈಗ 2.14 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಓಮಿಕ್ರಾನ್ ಸಂಖ್ಯೆ ಕೂಡಾ 2,135 ದಾಟಿದೆ.

ಪ್ರಕರಣಗಳ ಉಲ್ಬಣದಿಂದಾಗಿ ಶಾಲೆಗಳನ್ನು ಮುಚ್ಚುವುದು, ಸಾರ್ವಜನಿಕ ಸಾರಿಗೆಯ ಮೇಲಿನ ನಿರ್ಬಂಧಗಳು ಮತ್ತು ರಾತ್ರಿ ಮತ್ತು ವಾರಾಂತ್ಯದ ಕರ್ಫ್ಯೂ ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಾಗಲೇ ಹಲವಾರು ರಾಜ್ಯಗಳು ತೆಗೆದುಕೊಂಡಿವೆ.

ಓದಿ:ರಕ್ಷಣಾ ಸಚಿವರ ಕೈ ಸೇರಲಿದೆ ಹೆಲಿಕಾಪ್ಟರ್ ದುರಂತದ ತನಿಖಾ ವರದಿ: ಗೊತ್ತಾಗಲಿದೆಯಾ ನಿಖರ ಕಾರಣ?

ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 18,000 ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಮಹಾರಾಷ್ಟ್ರವು ಕೋವಿಡ್ ಉಲ್ಬಣದಲ್ಲಿ ಅಗ್ರಸ್ಥಾನದಲ್ಲಿದೆ. ಮುಂಬೈ ಒಂದರಲೇ 10,860 ಪ್ರಕರಣಗಳು ದಾಖಲಾಗಿದ್ದು, ಹಿಂದಿನ ದಿನಕ್ಕಿಂತ 34 ಪ್ರತಿಶತದಷ್ಟು ಹೆಚ್ಚು ವರದಿಯಾಗಿದೆ.

ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಮಾತನಾಡಿ, ದೈನಂದಿನ ಕೋವಿಡ್ ಪ್ರಕರಣಗಳು 20,000 ಗಡಿ ದಾಟಿದರೆ, ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ನಗರದಲ್ಲಿ ಲಾಕ್‌ಡೌನ್ ವಿಧಿಸಲಾಗುವುದು ಎಂದು ಜನರನ್ನು ಎಚ್ಚರಿಸಿದ್ದಾರೆ.

ABOUT THE AUTHOR

...view details