ನವದೆಹಲಿ:ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟ ಮುಂದುವರೆದಿದ್ದು, ಇದೀಗ ಅದರ ಮುಂದುವರಿದ ಭಾಗವಾಗಿ ಕೇಂದ್ರ ಆರೋಗ್ಯ ಇಲಾಖೆ ಬುಧವಾರದಿಂದ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್ ವ್ಯಾಕ್ಸಿನ್ ನೀಡಲು ನಿರ್ಧರಿಸಿದೆ.
ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಮಾರ್ಚ್ 16ರಿಂದ 12,13 ಹಾಗೂ 14 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕೋವಿಡ್ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಇದರ ಜೊತೆಗೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ನೀಡಲಾಗುವುದು ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.