ನವದೆಹಲಿ: ದೇಶದಲ್ಲಿ ಹೊಸದಾಗಿ ಕಾಣಿಸಿಕೊಳ್ಳುವ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಸುಮಾರು 10 ಸಾವಿರ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 3,37,704 ಕೊರೊನಾ ಪ್ರಕರಣಗಳು ದಾಖಲಾಗಿವೆ. ಸಾವಿನ ಸಂಖ್ಯೆ ನಿನ್ನೆಗಿಂತ ಇಂದು ಶೇ.40ರಷ್ಟು ಕಡಿಮೆಯಾಗಿದ್ದು, 488 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಹೌದು, ಕಳೆದ 24 ಗಂಟೆಯಲ್ಲಿ 3,37,704 ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಹಿಂದಿನ ದಿನಕ್ಕೆ ಹೋಲಿಸಿದರೆ, ಕಳೆದ 24 ಗಂಟೆಗಳಲ್ಲಿ ಸುಮಾರು 10 ಸಾವಿರ ಸೋಂಕಿತರು ಕಡಿಮೆ ಪತ್ತೆಯಾಗಿದ್ದಾರೆ. ಒಂದು ದಿನದಲ್ಲಿ 488 ಮಂದಿ ಕೋವಿಡ್ನಿಂದ ಸಾವನ್ನಪ್ಪಿದ್ದು, 2,42,676 ಸೋಂಕಿನಿಂದ ಗುಣಮುಖರಾಗಿದ್ದಾರೆ.
ಓದಿ:Instant Loans: ತ್ವರಿತ ಸಾಲ ತೆಗೆದುಕೊಳ್ಳಬೇಕೇ? ಈ ವಿಚಾರಗಳ ಬಗ್ಗೆ ಗಮನಹರಿಸಿ..
ದೇಶದಲ್ಲಿ ಒಟ್ಟು ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 10,050ಕ್ಕೆ ಏರಿಕೆ ಕಂಡಿದೆ. ಇನ್ನು ದಿನವೊಂದಕ್ಕೆ ಒಮಿಕ್ರಾನ್ ಸೋಂಕು ಕಾಣಿಸಿಕೊಳ್ಳುವವರ ಪ್ರಮಾಣ ಶೇಕಡಾ 3.69ರಷ್ಟಿದೆ.