ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 18,833 ಹೊಸ ಕೋವಿಡ್-19 (COVID-19) ಪ್ರಕರಣಗಳು ದೃಢಪಟ್ಟಿವೆ. ಒಟ್ಟು ಸೋಂಕಿತರ ಸಂಖ್ಯೆ 3,38,71,881ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ 18,833 ಕೋವಿಡ್ ಕೇಸ್ ಪತ್ತೆ; ಕೇರಳದಲ್ಲಿ ಅತೀ ಹೆಚ್ಚು ಪ್ರಕರಣ ವರದಿ - ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ
ದೇಶದಲ್ಲಿ ಮಹಾಮಾರಿ ಕೋವಿಡ್ ಸೋಂಕಿಗೆ ನಿನ್ನೆ 278 ಮಂದಿ ಸಾವನ್ನಪ್ಪಿದ್ದು, ಕಳೆದ 203 ದಿನಗಳಿಗೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ.
ದೇಶದಲ್ಲಿ ಮಹಾಮಾರಿ ಸೋಂಕಿಗೆ ನಿನ್ನೆ 278 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ ಒಟ್ಟು 4,49,538 ಜನರು ಮಾರಕ ಸೋಂಕಿಗೆ ಮೃತಪಟ್ಟಿದ್ದಾರೆ. ಸದ್ಯಕ್ಕೆ 2,46,687 ಸಕ್ರಿಯ ಪ್ರಕರಣಗಳಿದ್ದು, ಕಳೆದ 203 ದಿನಕ್ಕೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಮಂಗಳವಾರ 24,770 ಸೋಂಕಿತರು ಗುಣಮುಖರಾಗಿದ್ದು, ಭಾರತದ ಚೇತರಿಕೆಯ ಪ್ರಮಾಣವು ಶೇಕಡಾ 97.94 ರಷ್ಟಿದೆ.
ದೇಶದ ಎಲ್ಲಾ ರಾಜ್ಯಗಳಿಗೆ ಹೋಲಿಸಿದರೆ ಕೇರಳದಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗುತ್ತಿವೆ. ಇಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 9,735 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. ಇನ್ನುಳಿದಂತೆ, ಮಹಾರಾಷ್ಟ್ರದಲ್ಲಿ 2,401, ಮಿಜೋರಾಂ - 1,471, ತಮಿಳುನಾಡು- 1,449 ಮತ್ತು ಆಂಧ್ರಪ್ರದೇಶದಲ್ಲಿ 671 ಕೊರೊನಾ ಪ್ರಕರಣಗಳು ದೃಢಪಟ್ಟಿದೆ.