ತಿರುವನಂತಪುರಂ(ಕೆರಳ) : ಸಿಪಿಎಂ ತಿರುವನಂತಪುರ ಜಿಲ್ಲಾ ಸಮಿತಿ ಕಚೇರಿ ಮೇಲೆ ಕಲ್ಲು ತೂರಾಟ ನಡೆದಿದೆ. ಶನಿವಾರ ಬೆಳಗಿನ ಜಾವ ಎರಡು ಗಂಟೆ ಸುಮಾರಿಗೆ ಕಚೇರಿ ಮೇಲೆ ದಾಳಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದಾಳಿಯಲ್ಲಿ ಕಚೇರಿ ಎದುರು ನಿಲ್ಲಿಸಿದ್ದ ಜಿಲ್ಲಾ ಕಾರ್ಯದರ್ಶಿಗಳ ವಾಹನಕ್ಕೆ ಹಾನಿಯಾಗಿದೆ.
ಬೈಕ್ನಲ್ಲಿ ಬಂದು ಕಲ್ಲು ಎಸೆಯುವ ದೃಶ್ಯ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೂರು ಬೈಕ್‌ಗಳಲ್ಲಿ ಬಂದ ಆರು ಮಂದಿಯ ತಂಡ ಈ ದಾಳಿ ನಡೆಸಿದೆ. ಕರ್ತವ್ಯ ನಿರತ ಪೊಲೀಸರು ಬೈಕ್ ನಲ್ಲಿ ಬಂದು ಕಚೇರಿಗೆ ಕಲ್ಲು ತೂರಾಟ ನಡೆಸಿದವರ ಹಿಂದೆ ಓಡಿದರೂ ಹಿಡಿಯಲು ಸಾಧ್ಯವಾಗಲಿಲ್ಲ. ನಗರ ಪೊಲೀಸ್ ಆಯುಕ್ತ ಸ್ಪರ್ಜನ್ ಕುಮಾರ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.