ಕರ್ನಾಟಕ

karnataka

ETV Bharat / bharat

ಕೇರಳ: ಸಿಪಿಎಂ ಕಾರ್ಯಕರ್ತನ ಬರ್ಬರ ಹತ್ಯೆ - ಆರ್‌ಎಸ್‌ಎಸ್‌ ಕಾರ್ಯಕರ್ತ

ಕಣ್ಣೂರಿನ ತಲಶ್ಶೇರಿಯಲ್ಲಿ ಸಿಪಿಎಂ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಪ್ರಕರಣದ ಹಿಂದೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಕೈವಾಡವಿದೆ ಎಂದು ಆರೋಪಿಸಲಾಗಿದೆ.

ಹರಿದಾಸನ್
ಹರಿದಾಸನ್

By

Published : Feb 21, 2022, 9:59 AM IST

Updated : Feb 21, 2022, 10:29 AM IST

ಕಣ್ಣೂರು: ಸಿಪಿಎಂ ಕಾರ್ಯಕರ್ತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಲಶ್ಶೇರಿಯಲ್ಲಿ ಸೋಮವಾರ ನಡೆದಿದೆ.

ಕುಣಿಯಿಲ್ ಹರಿದಾಸನ್(54) ಮೃತ ಕಾರ್ಯಕರ್ತ. ಮೀನುಗಾರನಾಗಿದ್ದ ಹರಿದಾಸ್, ಇಂದು ಬೆಳಗಿನ ಜಾವ 2 ಗಂಟೆಗೆ ಕೆಲಸ ಮುಗಿಸಿ ಮನೆಗೆ ವಾಪಸ್​ ಆಗುತ್ತಿದ್ದ ವೇಳೆ ದುರ್ಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಭೀಕರ ಹತ್ಯೆ, ನಿಷೇಧಾಜ್ಞೆ ಜಾರಿ

ಈ ಹತ್ಯೆಯ ಹಿಂದೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಕೈವಾಡವಿದೆ ಎಂದು ಸಿಪಿಎಂ ಆರೋಪಿಸಿದೆ. ಜೊತೆಗೆ ಇಂದು ತಲಶ್ಶೇರಿ ಪುರಸಭೆ ಮತ್ತು ನ್ಯೂ ಮಾಹೆ ಪಂಚಾಯತ್‌ನಲ್ಲಿ ಹರತಾಳ ಘೋಷಿಸಲಾಗಿದೆ.

ಕಳೆದ ವಾರ ದೇವಸ್ಥಾನದ ಉತ್ಸವಕ್ಕೆ ಸಂಬಂಧಿಸಿದಂತೆ ಈ ಪ್ರದೇಶದಲ್ಲಿ ಎರಡು ಸಂಘಟನೆಗಳ ನಡುವೆ ಮಾರಾಮಾರಿ ನಡೆದಿತ್ತು. ಹರಿದಾಸನ್ ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Last Updated : Feb 21, 2022, 10:29 AM IST

ABOUT THE AUTHOR

...view details