ಫಿರೋಜಾಬಾದ್, ಉತ್ತರ ಪ್ರದೇಶ:ಜಿಲ್ಲೆಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ಇಲ್ಲಿನ ತುಂಡ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿಯ ಗ್ರಾಮದ ಇಬ್ಬರು ಯುವಕರು ಮೊದಲು ಆಕೆಯನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿ ನಂತರ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಇಬ್ಬರೂ ಕೂಡ ಆಕೆಯ ಅಶ್ಲೀಲ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಲು ಆರಂಭಿಸಿದ್ದರು. ಇಬ್ಬರೂ ಆಕೆಯ ಮೇಲೆ ಹಲವಾರು ಬಾರಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ನಂತರ ಬಾಲಕಿ ಅವರ ಕರೆಗೆ ಬರಲು ನಿರಾಕರಿಸಿದಾಗ ಒಂದು ದಿನ ಅವರು ವಿಡಿಯೋವನ್ನು ವೈರಲ್ ಮಾಡಿದರು. ಪ್ರಕರಣದಲ್ಲಿ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಮಂಗಳವಾರ ತುಂಡ್ಲಾದಲ್ಲಿ ಆರೋಪಿಗಳಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ದೂರಿನಲ್ಲಿ ಸಂತ್ರಸ್ತೆ ತಂದೆ ಹೇಳಿದ್ದು ಹೀಗೆ..:ಗ್ರಾಮದ ಇಬ್ಬರು ಯುವಕರು ತಮ್ಮ ಮಗಳನ್ನು ಪ್ರೀತಿಯ ಬಲೆಗೆ ಕೆಡವಿದ್ದರು. ನಂತರ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ವೇಳೆ, ಆಕೆಯ ಅಶ್ಲೀಲ ವಿಡಿಯೋ ಮಾಡಿದ್ದಾರೆ. ಯಾರಿಗಾದರೂ ಹೇಳಿದರೆ ಈ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಈ ವಿಡಿಯೋಗೆ ಹೆದರಿ ಆರೋಪಿಗಳು ಆತನೊಂದಿಗೆ ಸೇರಿ ಹಲವು ಬಾರಿ ಹೇಯ ಕೃತ್ಯಗಳನ್ನು ಎಸಗಿದ್ದಾರೆ. ಒಮ್ಮೆ ಆರೋಪಿಗಳು ಕೇಳಿದಾಗ ಆಕೆ ಬರಲು ನಿರಾಕರಿಸಿದ್ದಾಳೆ. ಆಗ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.