ಬರೇಲಿ, ಉತ್ತರಪ್ರದೇಶ:ಜಿಲ್ಲೆಯಲ್ಲಿ ಅಮಾನುಷ ಘಟನೆಯೊಂದು ಬೆಳಕಿಗೆ ಬಂದಿದೆ. ಮಾಜಿ ಪ್ರಿಯಕರನೊಬ್ಬ ವಿವಾಹಿತ ಮಹಿಳೆಯೊಬ್ಬರ ಅಶ್ಲೀಲ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಘಟನೆ ಹೊರ ಬಿದ್ದಿದೆ.
ಏನಿದು ಪ್ರಕರಣ?: ಜಿಲ್ಲೆಯ ಬರದರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ವಿವಾಹಿತ ಮಹಿಳೆಯೊಬ್ಬರು ತನ್ನ ಮಾಜಿ ಪ್ರಿಯಕರ ಮತ್ತು ಆತನ ಸೋದರ ಸಂಬಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ನನ್ನೊಂದಿಗೆ ವಿವಾಹೇತರ ಸಂಬಂಧ ಹೊಂದುವಂತೆ ನನ್ನ ಮಾಜಿ ಪ್ರಿಯಕರ ಒತ್ತಡ ಹೇರಿತ್ತಿದ್ದನು. ಅಷ್ಟೇ ಅಲ್ಲ ಇದಕ್ಕೆ ಒಪ್ಪದಿದ್ದಲ್ಲಿ ನನ್ನ ಅಶ್ಲೀಲ ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನು. ನಾನು ಧೈರ್ಯ ಮಾಡಿ ಅವನ ಬೇಡಿಕೆ ನಿರಾಕರಿಸಿದಾಗ ನನ್ನ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ್ದಾನೆ ಎಂದು ವಿವಾಹಿತ ಮಹಿಳೆ ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಪೊಲೀಸರಿಗೆ ನೀಡಿದ ಲಿಖಿತ ದೂರಿನಲ್ಲಿ, ನನಗೆ ವಿಕಾಸ್ ಎಂಬ ವ್ಯಕ್ತಿಯೊಂದಿಗೆ ಮದುವೆಗೂ 3 ವರ್ಷಗಳ ಹಿಂದೆ ಸಂಬಂಧವಿತ್ತು. ಆ ಸಂಬಂಧ ಮದುವೆಯ ನಂತರ ಕೊನೆಗೊಂಡಿತು. ಕಳೆದ ಎರಡು ವರ್ಷಗಳಿಂದ ಮಾಜಿ ಗೆಳೆಯ ವಿಕಾಸ್ ಮತ್ತು ಆತನ ಸೋದರ ಸಂಬಂಧಿ ಸಂಭವ್ ಶರ್ಮಾ ಅಶ್ಲೀಲ ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ ನನಗೆ ಬ್ಲಾಕ್ಮೇಲ್ ಮಾಡುತ್ತಿದ್ದರು. ಅದಲ್ಲದೇ ಬಲವಂತವಾಗಿ ದೈಹಿಕ ಸಂಬಂಧ ಬೆಳೆಸುತ್ತಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.