ಕಾನ್ಪುರ (ಉತ್ತರ ಪ್ರದೇಶ): ಉಪ್ಪು ತಿಂದವನು ನೀರು ಕುಡಿಯಲೇಬೇಕು. ಹಾಗೇ ತಪ್ಪು ಮಾಡಿದವನು ಶಿಕ್ಷೆ ಅನುಭವಿಸಲೇಬೇಕು. ಆದರೆ, ಇಲ್ಲೊಬ್ಬ ವ್ಯಕ್ತಿ ಮಾಡಿದ ತಪ್ಪಿನಿಂದ ಜೈಲು ಶಿಕ್ಷೆ ಅನುಭವಿಸಲು ಇಷ್ಟವಿಲ್ಲದ ಕಾರಣ ಮತ್ತೊಂದು ಎಡವಟ್ಟು ಮಾಡಿಕೊಂಡ ವಿಚಿತ್ರ ಘಟನೆ ನಡೆದಿದೆ.
ಹೌದು, ಹದಿಹರೆಯದ ಯುವತಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಆರೋಪಿಯೊಬ್ಬ ಜೈಲಿಗೆ ಹೋಗಲು ಇಷ್ಟವಿಲ್ಲದ ಕಾರಣ ಪೊಲೀಸ್ ಠಾಣೆಯಲ್ಲಿ ಹಲ್ಲಿಯೊಂದನ್ನು ನುಂಗಿ ಆಸ್ಪತ್ರೆ ಸೇರಿದ ವಿಚಿತ್ರ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಹಲ್ಲಿ ನುಂಗಿದ ಬಳಿಕ ವ್ಯಕ್ತಿಯ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಪೊಲೀಸರು ಆತನನ್ನು ತಕ್ಷಣ ನಗರದ ಭಿತರ್‌ಗಾಂವ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಅಲ್ಲಿನ ಆಸ್ಪತ್ರೆಯ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಅಲ್ಲಿಂದ ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಸದ್ಯ ಆರೋಪಿಗೆ ಚಿಕಿತ್ಸೆ ಮುಂದುವರೆದಿದ್ದು ಆತನ ಆರೋಗ್ಯ ಸ್ಥಿರವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ರಾಯಚೂರು: ಶಾಲಾ ಬಿಸಿಯೂಟದ ಉಪ್ಪಿಟ್ಟಿನಲ್ಲಿ ಹಲ್ಲಿ.. ಆಹಾರ ಸೇವಿಸಿದ 70 ಮಕ್ಕಳು ಅಸ್ವಸ್ಥ
ಜೂನ್ 14 ರಂದು, ಸಾಧ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬರು ತಮ್ಮ 18 ವರ್ಷದ ಮಗಳನ್ನು ತಮ್ಮ ಸಂಬಂಧಿರಲ್ಲಿನ ಮಹಳೆಯೊಬ್ಬರು ಕರೆದುಕೊಂಡು ಹೋಗಿದ್ದಾರೆಂದು ಪೊಲೀಸರಿಗೆ ದೂರು ನೀಡಿದ್ದರು. ಆತ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೂಡ ಆರಂಭಿಸಿದ್ದರು.