ನವದೆಹಲಿ:ದೆಹಲಿಯ ಆರ್.ಕೆ. ಪುರಂನಲ್ಲಿ ಇಂದು (ಭಾನುವಾರ) ಬೆಳಗ್ಗೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರನ್ನು ಹತ್ಯೆಗೈದಿದ್ದಾರೆ. ಪ್ರಕರಣ ಸಂಬಂಧ ಇಬ್ಬರು ದುಷ್ಕರ್ಮಿಗಳನ್ನು ನೈಋತ್ಯ ದೆಹಲಿಯ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ಪ್ರಮುಖ ಆರೋಪಿ ಮತ್ತು ಆತನ ಸಹಚರನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದರು.
ತಮ್ಮ ಸಹೋದರನನ್ನು ದುಷ್ಕರ್ಮಿಗಳಿಂದ ರಕ್ಷಿಸಲು ಹೋಗಿ ಸಹೋದರಿಯರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಯುತ್ತಿರುವುದರಿಂದ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.
ಗುಂಡಿನ ದಾಳಿ ನಡೆದ ಘಟನಾ ಸ್ಥಳ ನೈರುತ್ಯ ದೆಹಲಿಯ ಉಪ ಪೊಲೀಸ್ ಆಯುಕ್ತ ಮನೋಜ್ ಸಿ. ಪ್ರತಿಕ್ರಿಯಿಸಿ, "ಆರ್.ಕೆ.ಪುರಂ ಪೊಲೀಸ್ ಠಾಣೆಗೆ ಬೆಳಿಗ್ಗೆ 4:40ಕ್ಕೆ ಅಂಬೇಡ್ಕರ್ ಬಸ್ತಿಯಲ್ಲಿ ನನ್ನ ಇಬ್ಬರು ಸಹೋದರಿಯರ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಕರೆ ಬಂದಿದೆ. ತಕ್ಷಣ ಘಟನಾ ಸ್ಥಳಕ್ಕೆ ತಲುಪಿದ ಪೊಲೀಸರು ಗಾಯಾಳು ಸಹೋದರಿಯರಾದ ಪಿಂಕಿ (30) ಮತ್ತು ಜ್ಯೋತಿ (29) ಎಂಬಿಬ್ಬರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಕರೆದೊಯ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಸಾವನ್ನಪ್ಪಿದರು" ಎಂದು ಮಾಹಿತಿ ನೀಡಿದ್ದಾರೆ. ದಾಳಿ ನಡೆಸಿದ ಆರೋಪಿಗಳು ಕೂಡಲೇ ಅಪರಾಧ ಸ್ಥಳದಿಂದ ಪರಾರಿಯಾಗಿದ್ದರು.
ಇದನ್ನೂ ಓದಿ:ಕೋರ್ಟ್ನಲ್ಲಿ ವಕೀಲರ ಸೋಗಿನಲ್ಲಿದ್ದ ದುಷ್ಕರ್ಮಿಯಿಂದ ಫೈರಿಂಗ್: ಮಹಿಳೆಗೆ ಗುಂಡೇಟು
“ನಮ್ಮ ಪ್ರಾಥಮಿಕ ತನಿಖೆಯಿಂದ ಸಹೋದರ ಮತ್ತು ಹಲ್ಲೆಕೋರರ ನಡುವೆ ಹಣಕಾಸಿನ ವಿವಾದವಿತ್ತು ಎಂದು ತಿಳಿದುಬಂದಿದೆ. ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ಪ್ರಕರಣಕ್ಕೆ ಸಂಬಂಧಿಸಿ ಶಸ್ತ್ರಾಸ್ತ್ರ ಕಾಯ್ದೆ ಹಾಗು ಐಪಿಸಿ ಸೆಕ್ಷನ್ 302 ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಲಾಗಿದೆ. ಸದ್ಯ ಇಬ್ಬರೂ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ" ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿ ನಡೆದ ಘಟನಾ ಸ್ಥಳ ಅತ್ಯಾಚಾರ ಪ್ರಕರಣದಲ್ಲಿ ಜೈಲಿನಿಂದ ಹೊರಬಂದು ಗುಂಡು ಹಾರಿಸಿದ ಆರೋಪಿಗಳು: ಉತ್ತರ ಪ್ರದೇಶದ ಉನ್ನಾವೋದಲ್ಲಿ ಈ ಘಟನೆ ಮೇ ತಿಂಗಳ ಕೊನೆಯಲ್ಲಿ ನಡೆದಿತ್ತು. ಗಂಗಾ ಘಾಟ್ ಕೊಟ್ಟಾಲಿ ಪ್ರದೇಶದ ಹಳ್ಳಿಯೊಂದರಲ್ಲಿ ವಾಸಿಸುತ್ತಿದ್ದ ಬಾಲಕಿಯ ಮೇಲೆ 6 ವರ್ಷಗಳ ಹಿಂದೆ ಅತ್ಯಾಚಾರ ನಡೆದಿತ್ತು. ಸಂತ್ರಸ್ತೆ ತಾಯಿಯ ದೂರಿನ ಮೇರೆಗೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು.
ಆದರೆ ಕೆಲ ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿಗಳಾದ ಶುಕ್ಲಗಂಜ್ ನಿವಾಸಿಗಳಾದ ವೀರೇಂದ್ರ, ರವಿ ಮತ್ತು ಸಂದೀಪ್ ಮೇ 31 ರಂದು ರಾತ್ರಿ ಸುಮಾರು 11 ಗಂಟೆಗೆ ಅತ್ಯಾಚಾರಕ್ಕೆ ಒಳಗಾಗಿದ್ದ ಬಾಲಕಿಯ ಮನೆಗೆ ಬೈಕಿನಲ್ಲಿ ಬಂದು ಗುಂಡು ಹಾರಿಸಿ ಪರಾರಿಯಾಗಿದ್ದರು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿದ್ದರು.
ಇದನ್ನೂ ಓದಿ:Ukrainian woman: ಉತ್ತರ ಪ್ರದೇಶದ ಲಖನೌನಲ್ಲಿ ಉಕ್ರೇನ್ ದೇಶದ ಮಹಿಳೆ ಶವವಾಗಿ ಪತ್ತೆ
ಉನ್ನಾವೋ: ಅತ್ಯಾಚಾರ ಸಂತ್ರಸ್ತೆಯ ಮನೆ ಮುಂದೆ ಗುಂಡು ಹಾರಿಸಿದ ಆರೋಪಿಗಳು- ವಿಡಿಯೋ