ಕರ್ನಾಟಕ

karnataka

ETV Bharat / bharat

ದೆಹಲಿ ಸಿಎಂ ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ ದಾಖಲು - DELHI CHIEF MINISTER ARVIND KEJRIWAL

ಕೇಜ್ರಿವಾಲ್ ಅವರು ಚುನಾವಣಾ ಸಮಯದಲ್ಲಿ ಈ ರೀತಿಯ ಹೇಳಿಕೆಗಳನ್ನು ಹಲವು ಬಾರಿ ನೀಡಿದ್ದಾರೆ. ಬಿಜೆಪಿ ನಾಯಕ ದಿವಂಗತ ಅರುಣ್ ಜೇಟ್ಲಿ ಮತ್ತು ಅಕಾಲಿದಳದ ಹಿರಿಯ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಅವರ ವಿರುದ್ಧವೂ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದಾರೆ. ನ್ಯಾಯಾಲಯದ ವಿಚಾರಣೆಯನ್ನು ಕೈಗೊಂಡಾಗ ಕ್ಷಮೆ ಯಾಚಿಸಿದ್ದಾರೆ ಎಂದು ಜೈಜಿತ್ ಸಿಂಗ್ ಜೊಹಾಲ್ ಎಂಬವರು ಆರೋಪಿಸಿದ್ದಾರೆ.

ದೆಹಲಿ ಸಿಎಂ ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ ದಾಖಲು
ದೆಹಲಿ ಸಿಎಂ ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ ದಾಖಲು

By

Published : Nov 1, 2021, 7:16 PM IST

ನವದೆಹಲಿ: ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಥಿಂಡಾ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಕೇಜ್ರಿವಾಲ್ ವಿರುದ್ಧ ಕೊಲೆಯತ್ನದ ಆರೋಪ ಹೊರಿಸಲಾಗಿದೆ. ಜೈಜಿತ್ ಸಿಂಗ್ ಜೊಹಾಲ್ ಎಂಬವರು ಈ ದೂರು ಸಲ್ಲಿಸಿದ್ದಾರೆ.

ಕೇಜ್ರಿವಾಲ್ ಅವರು ಇತ್ತೀಚೆಗೆ ಬಥಿಂಡಾದಲ್ಲಿ ನಡೆದ ರಾಜಕೀಯ ಸಭೆಯೊಂದರಲ್ಲಿ ತಮ್ಮ ವಿರುದ್ಧ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದಾರೆ. ಆದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಕೇಜ್ರಿವಾಲ್ ಅವರು ಚುನಾವಣಾ ಸಮಯದಲ್ಲಿ ಈ ರೀತಿಯ ಹೇಳಿಕೆಗಳನ್ನು ಹಲವು ಬಾರಿ ನೀಡಿದ್ದಾರೆ. ಬಿಜೆಪಿ ನಾಯಕ ದಿ.ಅರುಣ್ ಜೇಟ್ಲಿ ಮತ್ತು ಅಕಾಲಿದಳದ ಹಿರಿಯ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಅವರ ವಿರುದ್ಧವೂ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದಾರೆ. ನ್ಯಾಯಾಲಯದ ವಿಚಾರಣೆಯನ್ನು ಕೈಗೊಂಡಾಗ ಕ್ಷಮೆಯಾಚಿಸಿದ್ದಾರೆ ಎಂದು ಜೋಹಾಲ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತನ್ನ ರಾಜಕೀಯ ಲಾಭಕ್ಕಾಗಿ ಈ ರೀತಿಯ ಹೇಳಿಕೆ ನೀಡುವುದು ತಪ್ಪು. ತಮ್ಮ ಹೇಳಿಕೆಗಳನ್ನು ಕೋರ್ಟ್ ತೆಗೆದುಕೊಂಡಿದ್ದು, ಶೀಘ್ರದಲ್ಲೇ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಕರೆಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details