ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪುತ್ರ, ಸಂಸದ ಸಂಸದ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ (ಇಡಿ)ವು ವಿಚಾರಣೆಗೆ ಅವಕಾಶ ನೀಡುವಂತೆ ಸಮನ್ಸ್ ಜಾರಿ ಮಾಡಿರುವ ಬೆನ್ನಲ್ಲೇ ವಿಚಾರಣೆಗೆ ಹಾಜರಾಗಲು ಹೆಚ್ಚಿನ ಕಾಲಾವಕಾಶವನ್ನು ರಾಹುಲ್ ಗಾಂಧಿ ಕೋರಿದ್ದಾರೆ.
ಬುಧವಾರ ಇಬ್ಬರಿಗೂ ಸಮನ್ಸ್ ಜಾರಿ ಮಾಡಿರುವ ಇಡಿ, ರಾಹುಲ್ ಗಾಂಧಿಗೆ ಜೂನ್ 2ರಂದು(ಗುರುವಾರ) ಮತ್ತು ಸೋನಿಯಾ ಗಾಂಧಿಗೆ ಜೂನ್ 8ರಂದು ದೆಹಲಿಯಲ್ಲಿರುವ ಇಡಿ ಮುಖ್ಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಆದರೆ, ರಾಹುಲ್ ನಾಳೆ (ಜೂನ್ 2) ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲ್ಲ. ಹೆಚ್ಚಿನ ಕಾಲಾವಕಾಶ ಕೊಡಬೇಕೆಂದು ಇಡಿಗೆ ಪತ್ರ ಬರೆದಿದ್ದಾರೆ. ಇತ್ತ, ಸೋನಿಯಾ ಜೂನ್ 8ರಂದೇ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.