ನವದೆಹಲಿ:ಈ ಬಾರಿಯ ಕೇಂದ್ರ ಹಣಕಾಸು ಬಜೆಟ್ ಬಂಡವಾಳಶಾಹಿಗಳ ಪರವಾಗಿದ್ದು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗೆ ಉದ್ಯೋಗದಾತರಿಗೆ ಕೇಂದ್ರ ಸರ್ಕಾರ ಮೋಸ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ಮೋದಿ ಅವರ ಬಜೆಟ್ ಎಂಎಸ್ಎಂಇಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡುವ ವಿಚಾರ ಪ್ರಸ್ತಾಪಿಸಿಲ್ಲ. ಜಿಎಸ್ಟಿ ರಿಲೀಫ್ ಕೂಡಾ ಇಲ್ಲ. ಇದು ದೇಶದ ಅತಿ ದೊಡ್ಡ ಕಾರ್ಮಿಕ ಸಮುದಾಯಕ್ಕೆ ಎಸಗಿದ ಮೋಸವಾಗಿದೆ ಎಂದು ಹರಿಹಾಯ್ದಿದ್ದಾರೆ.