ನಂದಿಗ್ರಾಮ(ಪಶ್ಚಿಮ ಬಂಗಾಳ): ಕಚ್ಚಾ ಬಾಂಬ್ ಸ್ಫೋಟಗೊಂಡು 9 ವರ್ಷದ ಬಾಲಕಿ ಮೃತಪಟ್ಟಿದ್ದು, ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿರುವ ಘಟನೆ ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ನಡೆದಿದೆ. ನಂದಿಗ್ರಾಮದ ಜಡು ಬ್ಯಾರಿ ಚಕ್ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.
ಚೆಂಡು ಎಂದುಕೊಂಡು ಕಚ್ಚಾಬಾಂಬ್ನಲ್ಲಿ ಮಕ್ಕಳ ಆಟ.. ಮುಂದಾಗಿದ್ದು ಮಾತ್ರ ಘೋರ ದುರಂತ - ಪಶ್ಚಿಮ ಬಂಗಾಳದ ನಂದಿಗ್ರಾಮ
ಚೆಂಡು ಎಂದುಕೊಂಡು ಕಚ್ಚಾಬಾಂಬ್ನಿಂದ ಆಟವಾಡುವಾಗ ಸ್ಫೋಟಗೊಂಡು ಓರ್ವ ಬಾಲಕಿ ಮೃತಪಟ್ಟಿದ್ದಾಳೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಪಶ್ಚಿಮ ಬಂಗಾಳದಲ್ಲಿ ಈ ಘಟನೆ ನಡೆದಿದೆ.
ಮೂಲಗಳ ಪ್ರಕಾರ, ಮನೆಯ ಹೊರಗೆ ಆಟವಾಡುತ್ತಿದ್ದ ಮಕ್ಕಳು, ಆಟ ಆಡುತ್ತಲೇ ಪಕ್ಕದಲ್ಲಿದ್ದ ಪಾಳುಬಿದ್ದ ಮನೆಗೆ ಹೋಗಿದ್ದಾರೆ. ಈ ವೇಳೆ ಚೀಲದಲ್ಲಿ ತುಂಬಿರಿಸಿದ್ದ ಕಚ್ಚಾ ಬಾಂಬ್ಗಳನ್ನು ಚೆಂಡುಗಳೆಂದು ಭಾವಿಸಿ ಅವುಗಳಿಂದ ಆಟವಾಡುವಾಗ ಸ್ಫೋಟಗೊಂಡಿವೆ.
ಘಟನೆಯಲ್ಲಿ ಮೂವರು ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ನಂದಿಗ್ರಾಮದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಓರ್ವ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಉಳಿದ ಇಬ್ಬರು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.