ಮುಂಬೈ: ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಅಕ್ಟೋಬರ್ 3ರಂದು ಎನ್‌ಸಿಬಿ ಬಂಧಿಸಿದ್ದ ಮಾಡೆಲ್ ಮುನ್ಮುನ್ ಧಮೇಚಾ ಅವರನ್ನು ಇಲ್ಲಿನ ಬೈಕುಲ್ಲಾ ಮಹಿಳಾ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಜಾಮೀನು ಪಡೆದ ಮೂರು ದಿನಗಳ ನಂತರ ಬಿಡುಗಡೆಗೊಂಡಿದ್ದಾರೆ.
ಸಹ ಆರೋಪಿಗಳಾದ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಮತ್ತು ಅರ್ಬಾಜ್ ಮರ್ಚೆಂಟ್ ಅವರೊಂದಿಗೆ ಇವರಿಗೂ ಸಹ ಜಾಮೀನು ನೀಡಲಾಗಿದೆ. ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.
ಧಮೇಚಾ ಅವರ ಪರ ವಕೀಲ ಅಲಿ ಕಾಶಿಫ್ ಖಾನ್ ಅವರು ಈ ಸಂಬಂಧ ಪ್ರತಿಕ್ರಿಯಿಸಿ, ಎಲ್ಲಾ ಕಾನೂನು ವಿಧಾನಗಳನ್ನು ಪೂರ್ಣಗೊಳಿಸಿದ ನಂತರ ಆಕೆಯನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ನಾವು ಈಗ ಆಕೆಗೆ ಮಧ್ಯಪ್ರದೇಶಕ್ಕೆ ಹೋಗಲು ಅನುಮತಿ ಕೋರಿ ಎನ್‌ಸಿಬಿ ಮುಂದೆ ಅರ್ಜಿ ಸಲ್ಲಿಸಲಿದ್ದೇವೆ ಎಂದಿದ್ದಾರೆ.