ತಮಿಳುನಾಡು: ದ್ರಾವಿಡರ ನಾಡಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮುಂಬರುವ ರೋಡ್ ಶೋ ಸಿದ್ಧತೆಗಳ ಕುರಿತು ಕರೂರಿನಲ್ಲಿ ಎನ್‌ಡಿಎ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು.
ರಂಗೇರಿದ ಚುನಾವಣೆ ಕಾವು: ತಮಿಳುನಾಡಲ್ಲಿ ನಾಳೆಯಿಂದ ಬಿಜೆಪಿ ರಾಷ್ಟ್ರೀಯ ನಾಯಕರ ರೋಡ್ ಶೋ - ತಮಿಳುನಾಡಲ್ಲಿ ರಂಗೇರಿದ ಚುನಾವಣೆ ಕಾವು
ಕೇಂದ್ರ ಗೃಹ ಸಚಿವ ಅಮಿತ್ ಶಾ ಏಪ್ರಿಲ್ 1 ರಂದು ತಮಿಳುನಾಡಿನ ಅರವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಹಾಗೆಯೇ ಮಾರ್ಚ್ 30 ಮತ್ತು ಏಪ್ರಿಲ್ 2 ರಂದು ಪ್ರಧಾನಿ ನರೇಂದ್ರ ಮೋದಿ ಧರಪುರಂ, ಮಧುರೈ ಮತ್ತು ಕನ್ಯಾಕುಮಾರಿಯಲ್ಲಿ ಪ್ರಚಾರ ಮಾಡಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಏಪ್ರಿಲ್ 1 ರಂದು ತಮಿಳುನಾಡಿನ ಅರವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಹಾಗೆಯೇ ಮಾರ್ಚ್ 30 ಮತ್ತು ಏಪ್ರಿಲ್ 2 ರಂದು ಪ್ರಧಾನಿ ನರೇಂದ್ರ ಮೋದಿ ಧರಪುರಂ, ಮಧುರೈ ಮತ್ತು ಕನ್ಯಾಕುಮಾರಿಯಲ್ಲಿ ಪ್ರಚಾರ ಮಾಡಲಿದ್ದಾರೆ. ಅಲ್ಲದೇ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾರ್ಚ್ 31 ರಂದು ತಮಿಳುನಾಡಿನಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಸಿ.ಟಿ.ರವಿ ಮಾಹಿತಿ ನೀಡಿದರು.
ಓದಿ : ಬಂಗಾಳದಲ್ಲಿ 2ನೇ ಹಂತದ ಚುನಾವಣಾ ಸಮರ: ಮಾಜಿ ಐಪಿಎಸ್ ಅಧಿಕಾರಿಗಳ ನಡುವೆ ಬಿಗ್ ಫೈಟ್