ಅಮರಾವತಿ:ಆಂಧ್ರಪ್ರದೇಶದಲ್ಲಿ ಕೊರೊನಾ ತಡೆಯುವ ನಿಟ್ಟಿನಲ್ಲಿ ಜೂನ್ 10 ರವರೆಗೆ ಕೋವಿಡ್ ಕರ್ಫ್ಯೂ ವಿಸ್ತರಿಸಲು ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ.
ರಾಜ್ಯದ ಪ್ರಸ್ತುತ ಕೊರೊನಾ ಸನ್ನಿವೇಶದ ಪರಿಶೀಲನೆಯ ನಂತರ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಕರ್ಫ್ಯೂ ವಿಸ್ತರಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕಳೆದ ವಾರದಿಂದ ಕೊರೊನಾ ಪ್ರಕರಣಗಳು ಕಡಿಮೆಗೊಳ್ಳುತ್ತಿದ್ದರೂ ಮುಂಜಾಗೃತಾ ಕ್ರಮವಾಗಿ ಕರ್ಫ್ಯೂ ವಿಸ್ತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರತಿದಿನ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ.
ರಾಜ್ಯ ಆರೋಗ್ಯ ಇಲಾಖೆಯ ಪ್ರಕಾರ, ಆಂಧ್ರಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,400 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದೆ. ಇನ್ನು 21,133 ಮಂದಿ ಗುಣಮುಖರಾಗಿದ್ದಾರೆ ಮತ್ತು 94 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿದೆ.