ಅಮರಾವತಿ(ಆಂಧ್ರಪ್ರದೇಶ):ವೇಶ್ಯಾಗೃಹದಲ್ಲಿ ಸಿಕ್ಕಿಕೊಳ್ಳುವ ವ್ಯಕ್ತಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವಂತಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ. ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ವಜಾಗೊಳಿಸುವಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಾಧೀಶರಾದ ಡಿ.ರಮೇಶ್ ಈ ತೀರ್ಪು ನೀಡಿದರು.
2020ರಲ್ಲಿ ಗುಂಟೂರು ಜಿಲ್ಲಾ ಪೊಲೀಸರು ದಾಖಲಿಸಿದ ಪ್ರಕರಣವೊಂದನ್ನು ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ಗುಂಟೂರಿನ ಪ್ರಥಮ ದರ್ಜೆ ಜುಡಿಶಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ (ವಿಶೇಷ ಮೊಬೈಲ್ ನ್ಯಾಯಾಲಯ) ನಡೆಯುತ್ತಿತ್ತು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಆ ವ್ಯಕ್ತಿ ಹೈಕೋರ್ಟ್ನ ಮೆಟ್ಟಿಲೇರಿದ್ದರು.