ಹೈದರಾಬಾದ್:ದುಬೈನಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 3.6 ಕೋಟಿ ರೂಪಾಯಿ ಮೌಲ್ಯದ 7.3 ಕೆಜಿ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಾಲ್ವರು ಪ್ರಯಾಣಿಕರು ಚಿನ್ನ ಸಾಗಿಸುತ್ತಿದ್ದರು.
ದುಬೈನಿಂದ ಹೈದರಾಬಾದ್ಗೆ ಬಂದ ಪ್ರಯಾಣಿಕರು ಚಿನ್ನವನ್ನು ಗುದದ್ವಾರದಲ್ಲಿಟ್ಟುಕೊಂಡು ಕಳ್ಳಸಾಗಣೆ ಮಾಡುತ್ತಿದ್ದರು. ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಇವರು ಸಿಕ್ಕಿಬಿದ್ದಿದ್ದಾರೆ. ಪೇಸ್ಟ್ ಮತ್ತು ಬಾರ್ ರೂಪದಲ್ಲಿದ್ದ 7.3 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದು, ಮುಂದಿನ ಕ್ರಮ ಕೈಗೊಂಡಿದ್ದಾರೆ.