ನವದೆಹಲಿ :ನಿವಾರ್ ಚಂಡಮಾರುತದ ಕಾರಣದಿಂದಾಗಿ ನವೆಂಬರ್ 25 ಹಾಗೂ 26ರಂದು ದಕ್ಷಿಣ ಭಾರತದಲ್ಲಿ ಕಾರ್ಯಾಚರಣೆ ಮಾಡುವ ಹಲವಾರು ವಿಶೇಷ ರೈಲುಗಳ ಸೇವೆಯನ್ನು ರದ್ದು ಮಾಡಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.
ನಿವಾರ್ ಚಂಡಮಾರುತ ತಮಿಳುನಾಡು ಹಾಗೂ ಪುದುಚೇರಿ ಕರಾವಳಿಯಲ್ಲಿ ಸಾಕಷ್ಟು ಹಾನಿ ಸೃಷ್ಟಿಸಿದ್ದು, ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ನೆಚ್ಚರಿಕೆ ನೀಡಿದ ಕಾರಣದಿಂದ ರೈಲು ಸೇವೆಗಳನ್ನು ರದ್ದು ಮಾಡಲಾಗಿದೆ.
ನಿವಾರ್ ಚಂಡಮಾರುತದಿಂದಾಗಿ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮಳೆ ಹಾಗೂ ಭೂಕುಸಿತ ಉಂಟಾಗುತ್ತಿದ್ದು, ಸಾಕಷ್ಟು ಪರಿಣಾಮ ಬೀರುವ ಸ್ಥಳಗಳಲ್ಲಿ 10ಕ್ಕೂ ಹೆಚ್ಚು ವಿಶೇಷ ರೈಲುಗಳ ಸೇವೆಯನ್ನ ರದ್ದು ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ಹೇಳಿದೆ.