ಬಿಹಾರ:ಯಾಸ್ ಸೈಕ್ಲೋನ್ ಆರ್ಭಟಕ್ಕೆ ಮಧುಬನಿಯಲ್ಲಿ ನೋಡ ನೋಡುತ್ತಿದ್ದಂತೆಯೇ ಕೇವಲ 10 ಸೆಕೆಂಡ್ಗಳಲ್ಲಿ ಮನೆಯೊಂದು ಕುಸಿದುಬಿದ್ದಿದೆ. ಅದೃಷ್ಟವಶಾತ್ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಜ್ಯದಲ್ಲಿ ಯಾಸ್ ಚಂಡಮಾರುತದಿಂದಾಗಿ ಕನಿಷ್ಠ 7 ಮಂದಿ ಮೃತಪಟ್ಟಿದ್ದು, ಆರು ಜನರು ಗಾಯಗೊಂಡಿದ್ದಾರೆ. ಸಿಎಂ ನಿತೀಶ್ ಕುಮಾರ್ ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ್ದಾರೆ.
ಯಾಸ್ ಆರ್ಭಟಕ್ಕೆ ಬಂಗಾಳ, ಒಡಿಶಾ, ಜಾರ್ಖಂಡ್ ರಾಜ್ಯಗಳು ನಲುಗಿ ಹೋಗಿವೆ. ಮುಂಜಾಗ್ರತಾ ಕ್ರಮ ಕೈಗೊಂಡರೂ ಕೋಟ್ಯಂತರ ರೂ. ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ. ಒಡಿಶಾದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಬೈತರಾಣಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಭಾರತೀಯ ನೌಕಾಪಡೆ ಬಾಲಸೋರ್ನಲ್ಲಿ ರಕ್ಷಣಾ ಕಾರ್ಯ ನಡೆಸುತ್ತಿದೆ. ಇತ್ತ ಪಶ್ಚಿಮ ಬಂಗಾಳದಲ್ಲಿ ಹಲವಡೆ ಭೂ ಕುಸಿತ ಉಂಟಾಗಿದ್ದು, ನೂರಾರು ಮನೆಗಳು ಧರೆಗುರುಳಿವೆ.
ಉತ್ತರ ಪ್ರದೇಶ, ಬಿಹಾರ ಸೇರಿ ಹಲವು ರಾಜ್ಯಗಳಿಗೂ ಯಾಸ್ ಎಫೆಕ್ಟ್ ತಗುಲಿದೆ. ಕತಿಹಾರ್ನ ಸದರ್ ಆಸ್ಪತ್ರೆಯೊಳಗೆ ನೀರು ನುಗ್ಗಿದ್ದು, ರೋಗಿಗಳು ಹಾಗೂ ಸಿಬ್ಬಂದಿ ಪರದಾಡಿದ್ದಾರೆ. ಆಸ್ಪತ್ರೆ ತುಂಬೆಲ್ಲಾ ನೀರು ತುಂಬಿದ್ದರೂ, ಅಲ್ಲಿನ ಸಿಬ್ಬಂದಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಕೆಲವರು ಬೈಕ್ಗಳ ಮೂಲಕ ಬಂದು ರೋಗಿಗಳನ್ನು ಬೇರೆಡೆಗೆ ಶಿಫ್ಟ್ ಮಾಡುತ್ತಿದ್ದಾರೆ.