ಪೂರ್ವ ಮೆದಿನಿಪುರ್ (ಪಶ್ಚಿಮ ಬಂಗಾಳ): ಯಾಸ್ ಚಂಡಮಾರುತದಿಂದ ರಾಜ್ಯದಲ್ಲಿ ಸಂಭವಿಸಿರುವ ಹಾನಿಗೆ ಕೇಂದ್ರ ಸರ್ಕಾರವು 20 ಸಾವಿರ ಕೋಟಿ ರೂ. ಪರಿಹಾರದ ಪ್ಯಾಕೇಜ್ ಘೋಷಿಸಬೇಕೆಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ದಿಘಾದಲ್ಲಿ ಮಾತನಾಡಿದ ಅವರು, ಪಿಎಂ ಜತೆ ಸಭೆ ನಡೆಸಿದ್ದು, ಹಾನಿಯ ವರದಿಯನ್ನು ಪ್ರಧಾನಿ ಮೋದಿಯವರಿಗೆ ಹಸ್ತಾಂತರಿಸಿದ್ದೇವೆ. ಅಂದಾಜು 20 ಸಾವಿರ ಕೋಟಿ ರೂ.ನಷ್ಟವಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ದಿಘಾ ಮತ್ತು ಸುಂದರಬನ್ಗೆ ತಲಾ 10 ಸಾವಿರ ಕೋಟಿ ರೂ.ಪರಿಹಾರ ನೀಡಬೇಕು ಎಂದರು.
ನಾಳೆ ನಾವು ವೈಮಾನಿಕ ಸಮೀಕ್ಷೆ ನಡೆಸಲಿದ್ದು, ಈ ಪ್ರದೇಶಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಅಗತ್ಯವಿದೆ ಎಂದರು.