ಸೇಲಂ(ತಮಿಳುನಾಡು):ಇಲ್ಲಿನ ಕರುಂಕಲ್ ಪಟ್ಟಿಯಲ್ಲಿ ಸಿಲಿಂಡರ್ ಸ್ಫೋಟಗೊಂಡಿರುವ (Salem cylinder blast) ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡರು.
ತಮಿಳುನಾಡಿನ ಸೇಲಂನ ಕರುಂಕಲ್ ಪಟ್ಟಿಯಲ್ಲಿರುವ ಪಂತುರಂಗನಾಥರ ಬೀದಿಯಲ್ಲಿ ಗಣೇಶನ್ ಎಂಬವರು ವಾಸವಿದ್ದಾರೆ. ಇಂದು ಬೆಳಗ್ಗೆ 6:30ರ ವೇಳೆ ಅವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಪರಿಣಾಮ ಐದು ಮನೆ ಕುಸಿತಗೊಂಡಿವೆ. ಘಟನೆಯಿಂದಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 14 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ತಲುಪಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಪೂಜಾಶ್ರೀ(10) ಎಂಬ ಬಾಲಕಿಯನ್ನು ಜೀವಂತವಾಗಿ ಹೊರತೆಗೆದಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಎಲ್ಲರನ್ನೂ ಸೇಲಂ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.