ಪುಣೆ (ಮಹಾರಾಷ್ಟ್ರ): ಉದ್ಯಮಿ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್‌ನ ಅಧ್ಯಕ್ಷ ಡಾ. ಸೈರಸ್ ಪೂನಾವಾಲಾ ಅವರಿಗೆ ಲಘು ಹೃದಯಾಘಾತದಿಂದ ಮಹಾರಾಷ್ಟ್ರದ ಪುಣೆಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ನವೆಂಬರ್ 16ರಂದು ಅವರಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.
ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶರೂ ಆಗಿರುವ 82 ವರ್ಷದ ಸೈರಸ್ ಪೂನಾವಾಲಾ ಅವರಿಗೆ ನಿನ್ನೆ ಅಂದರೆ ಗುರುವಾರ ಲಘು ಹೃದಯಾಘಾತ ಸಂಭವಿಸಿದೆ. ಇದರಿಂದ ಇಂದು ಬೆಳಗ್ಗೆ ಅವರನ್ನು ಪುಣೆಯ ರೂಬಿ ಹಾಲ್ ಕ್ಲಿನಿಕ್‌ಗೆ ದಾಖಲಿಸಲಾಗಿದೆ. ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.