ಕರ್ನಾಟಕ

karnataka

ETV Bharat / bharat

ಬಾಲಕಿಯ ವಿವಸ್ತ್ರಗೊಳಿಸಿ, ವಿಡಿಯೋ ಮಾಡಿ ವೈರಲ್ ಮಾಡಿದ ಪುಂಡರು: ಉತ್ತರ ಪ್ರದೇಶದಲ್ಲಿ ಅಮಾನವೀಯ ಘಟನೆ - ಉತ್ತರ ಪ್ರದೇಶದಲ್ಲಿ ಅಮಾನವೀಯ ಘಟನೆ

ಸಿಎಂ ಯೋಗಿ ಆದಿತ್ಯನಾಥ್ ನಾಡಲ್ಲಿ ಅಮಾನವೀಯ ಕೃತ್ಯವೊಂದು ಜರುಗಿದ್ದು, ಇಡೀ ಮಾನವ ಕುಲವೇ ತಲೆತಗ್ಗಿಸುವಂತಾಗಿದೆ.

dabangs-took-off-the-girl-lower-clothes-and-made-video-viral-in-moradabad
ಬಾಲಕಿಯ ವಿವಸ್ತ್ರಗೊಳಿಸಿ, ವಿಡಿಯೋ ಮಾಡಿ ವೈರಲ್ ಮಾಡಿದ ಪುಂಡರು: ಉತ್ತರ ಪ್ರದೇಶದಲ್ಲಿ ಅಮಾನವೀಯ ಘಟನೆ

By

Published : Jun 11, 2021, 4:01 PM IST

Updated : Jun 11, 2021, 4:15 PM IST

ಮೊರದಾಬಾದ್( ಉತ್ತರ ಪ್ರದೇಶ): ಪುಂಡ ಯುವಕರು ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ, ಆ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಮೊರದಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಬಾಲಕಿ ಕೈ ಮುಗಿದು ಪರಿಪರಿಯಾಗಿ ಬೇಡಿಕೊಂಡರೂ, ಮನ ಕರಗದ ಇಬ್ಬರು ದುಷ್ಕರ್ಮಿಗಳು ಆಕೆಯನ್ನು ಬಯಲಿನಲ್ಲಿ ವಿವಸ್ತ್ರಗೊಳಿಸಿ, ಮೊಬೈಲ್​ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿಕೊಂಡು, ವಿಡಿಯೋ ವೈರಲ್ ಮಾಡಿದ್ದಾರೆ.

ಬೋಜಪುರ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇದಕ್ಕೂ ಮೊದಲು ಬಾಲಕ ಮತ್ತು ಬಾಲಕಿ ಇಬ್ಬರು ತೋಟವೊಂದರ ಬಳಿ ಕುಳಿತುಕೊಂಡಿದ್ದರು. ಸ್ಥಳಕ್ಕೆ ಧಾವಿಸಿದ ಪುಂಡರ ಗುಂಪು, ಬಾಲಕನ ಮೇಲೆ ಹಲ್ಲೆ ಮಾಡಿ, ಬಾಲಕಿಯನ್ನು ವಿವಸ್ತ್ರಗೊಳಿಸಿದ್ದಾರೆ. ಈ ಘಟನೆಯ ನಂತರ ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಇಬ್ಬರು ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:114 ಟನ್ ಪ್ರಾಣವಾಯು ಹೊತ್ತು ರಾಜ್ಯಕ್ಕೆ ಬಂದ 31ನೇ ಆಕ್ಸಿಜನ್ ಎಕ್ಸ್‌ಪ್ರೆಸ್‌

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ದೇಹಾತ್ ವಿದ್ಯಾಸಾಗರ್ ಮಿಶ್ರಾ, ವಿಡಿಯೋ ವೈರಲ್ ಆಗಿರುವ ವಿಚಾರ ಮಾಧ್ಯಮಗಳ ಮೂಲಕ ಗೊತ್ತಾಗಿದೆ. ಈ ಸಂಬಂಧ ಬಾಲಕಿಯ ತಂದೆ ದೂರು ನೀಡಿದ್ದು, ಐಟಿ ಕಾಯ್ದೆ ಮತ್ತು ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ಮೊಹಮದ್ ಅರ್ಷದ್ ಮತ್ತು ಸಯೀದ್ ಎಂದು ಗುರುತಿಸಲಾಗಿದ್ದು, ಆದಷ್ಟು ಬೇಗನೇ ಸೆರೆ ಹಿಡಿಯುವ ಭರವಸೆ ನೀಡಿದ್ದಾರೆ.

Last Updated : Jun 11, 2021, 4:15 PM IST

ABOUT THE AUTHOR

...view details