ಕರ್ನಾಟಕ

karnataka

ETV Bharat / bharat

ದಲಿತ ಯುವತಿ ಮೇಲೆ ಗ್ಯಾಂಗ್​ರೇಪ್​: ಬಲವಂತದ ಗರ್ಭಪಾತದ ವೇಳೆ ದುರ್ಮರಣ - ದಲಿತ ಯುವತಿ ಮೇಲೆ ರೇಪ್​

ದಲಿತ ಯುವತಿಯೋರ್ವಳ ಮೇಲೆ ಅತ್ಯಾಚಾರವೆಸಗಿದ್ದು ಆಕೆ ಗರ್ಭಿಣಿಯಾಗುತ್ತಿದ್ದಂತೆ ಬಲವಂತವಾಗಿ ಗರ್ಭಪಾತ ಮಾಡಿಸಲು ಮುಂದಾಗಿದ್ದ ವೇಳೆ ಸಾವನ್ನಪ್ಪಿದ್ದಾಳೆ.

Rape case
Rape case

By

Published : Sep 30, 2021, 8:25 PM IST

ಮಹೋಬಾ(ಉತ್ತರ ಪ್ರದೇಶ):ಕಳೆದ ಆರು ತಿಂಗಳಿಂದ ನಿರಂತರವಾಗಿ ಅತ್ಯಾಚಾರಕ್ಕೊಳಗಾಗಿದ್ದ ಯುವತಿಯೋರ್ವಳು ಗರ್ಭಿಣಿಯಾಗಿದ್ದು, ಬಲವಂತವಾಗಿ ಗರ್ಭಪಾತ ಮಾಡಿಸಲು ಮುಂದಾಗಿದ್ದಾಗ ಸಾವನ್ನಪ್ಪಿದ್ದಾಳೆಂದು ತಿಳಿದು ಬಂದಿದೆ. ಉತ್ತರ ಪ್ರದೇಶದ ಮಹೋಬಾದಲ್ಲಿ ಈ ಘಟನೆ ನಡೆದಿದೆ.

ಮಹೋಬಾ ಜಿಲ್ಲೆಯ ಕಬ್ರೈ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯಲ್ಲಿ ವಾಸವಾಗಿದ್ದ 20 ವರ್ಷದ ದಲಿತ ಯುವತಿ ಮೇಲೆ ಆರೋಪಿ ಶೈಲೇಂದ್ರ ಬೆದರಿಕೆ ಹಾಕಿ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಆಕೆ ಗರ್ಭಿಣಿಯಾಗಿದ್ದಳು. ಆಕೆಯ ಆರೋಗ್ಯದಲ್ಲಿ ಹಠಾತ್ ಏರುಪೇರು ಕಂಡು ಬಂದ ಕಾರಣ ಮನೆಯವರಿಗೆ ಮಾಹಿತಿ ನೀಡಿದ್ದಾಳೆ. ಈ ವೇಳೆ ಯುವತಿ ತಂದೆ ಆರೋಪಿಯ ಮನೆಗೆ ತೆರಳಿ ಜಗಳವಾಡಿದ್ದು, ಈ ವೇಳೆ ಆತನಿಗೂ ಜೀವ ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ:ವಿಶ್ವದ ಅತಿದೊಡ್ಡ ಚಲನಚಿತ್ರ ನಗರಿ 'ರಾಮೋಜಿ ಫಿಲಂ​ ಸಿಟಿ' ಅಕ್ಟೋಬರ್​​ 8ರಿಂದ ಪುನಾರಂಭ

ತಡರಾತ್ರಿ ಆಕೆಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಗರ್ಭಪಾತ ಮಾಡಿಸಲು ಮುಂದಾಗಿದ್ದಾರೆ. ಈ ವೇಳೆ ಆಕೆ ಸಾವನ್ನಪ್ಪಿದ್ದಾಳೆ. ಇದಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ತಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೊಳಪಡಿಸಿದ್ದು, ತನಿಖೆ ಆರಂಭಿಸಿದ್ದಾರೆ. ಈಗಾಗಲೇ ಕೆಲ ಆರೋಪಿಗಳ ಬಂಧನ ಮಾಡಲಾಗಿದ್ದು, ವಿಚಾರಣೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.

ABOUT THE AUTHOR

...view details