ನವದೆಹಲಿ :ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿವಾದಾತ್ಮಕ ಟ್ವೀಟ್ ಅನ್ನು ಟ್ವಿಟರ್ ಇಂಡಿಯಾ ಅಳಿಸಿ ಹಾಕಿದೆ. ದೆಹಲಿಯಲ್ಲಿ ಹತ್ಯೆಗೀಡಾದ 9 ವರ್ಷದ ದಲಿತ ಬಾಲಕಿಯ ಪೋಷಕರನ್ನು ಭೇಟಿಯಾಗಿದ್ದ ಫೋಟೋವನ್ನು ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದರು. ಇದು ವಿವಾದಾತ್ಮಕ ಹಿನ್ನೆಲೆಯಲ್ಲಿ ಟ್ವೀಟ್ ಅನ್ನು ಡಿಲೀಟ್ ಮಾಡಲಾಗಿದೆ.
ಸಂತ್ರಸ್ತೆಯ ಪೋಷಕರ ಮುಖ ತೋರಿಸಿರುವುದರಿಂದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ (NCPCR) ಟ್ವಿಟರ್ ಸಂಸ್ಥೆಗೆ ನೋಟಿಸ್ ನೀಡಿದೆ. ಟ್ವಿಟರ್ ಇಂಡಿಯಾ ಗ್ರಿವೆನ್ಸಸ್ ಅಧಿಕಾರಿಗೆ ಪತ್ರ ಬರೆದಿದ್ದು, ಇದು ಬಾಲಾಪರಾಧಿಗಳ ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದೆ. ರಾಹುಲ್ ಗಾಂಧಿ ಖಾತೆ ವಿರುದ್ಧ ಕ್ರಮಕ್ಕೆ ಸೂಚಿಸಿದೆ.