ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಾಲಿವುಡ್ ನಟಿ ಕಂಗನಾ ರಣಾವತ್ ( actor Kangana Ranaut ) ಅವರಿಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯುವಂತೆ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಲಿವಾಲ್ (Swati Maliwal) ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.
1947ರಲ್ಲಿ ಭಾರತವು "ಭೀಖ್" (ಭಿಕ್ಷೆ) ಪಡೆದಿತ್ತು ಎಂದು ಹೇಳುವ ಮುಲಕ ರಾಷ್ಟ್ರದ ಹೆಮ್ಮೆಗೆ ಧಕ್ಕೆ ತಂದಿರುವ ನಟಿಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಕೋರಿದ್ದಾರೆ.
1947ರಲ್ಲಿ ಭಾರತವು ಗಳಿಸಿದ ಸ್ವಾತಂತ್ರ್ಯವು ಭಿಕ್ಷೆ ಎಂದು ಅವರು ಕರೆದಿದ್ದಾರೆ. ಇದು ಮಹಾತ್ಮಾ ಗಾಂಧಿ, ಭಗತ್ ಸಿಂಗ್ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ನಮ್ಮ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡುವ ಅಪಮಾನ ಎಂದು ರಣಾವತ್ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.