ಜಮ್ಮು:ಇಂದು ಜಮ್ಮು ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿಗೆ 3ನೇ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಒಟ್ಟು 305 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು, ಸುಮಾರು 7.37 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಮತದಾನ ಕೇಂದ್ರದಲ್ಲಿ ಕೊರೊನಾ ನಿಯಮಾವಳಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಪ್ರತಿ ಕೇಂದ್ರದಲ್ಲೂ ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ಮತ್ತು ಫೇಸ್ ಮಾಸ್ಕ್ ವ್ಯವಸ್ಥೆ ಕಡ್ಡಾಯ ಮಾಡಲಾಗಿದೆ.