ಜಮ್ಮು ಕಾಶ್ಮೀರ:ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಯ ಮೊದಲ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದೆ. ಮತದಾನದ ಹಿನ್ನೆಲೆ ಬಿಗಿಭದ್ರತೆ ಕೈಗೊಳ್ಳುವುದರ ಜೊತೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಭಾರತೀಯ ಸಂವಿಧಾನದ 370ನೇ ವಿಧಿ ರದ್ಧತಿ ನಂತರ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಡಿಡಿಸಿ ಚುನಾವಣೆ ಪ್ರಕ್ರಿಯೆ 8 ಹಂತಗಳಲ್ಲಿ ಮತದಾನ ನಡೆಯಲಿದ್ದು, ಇಂದಿನಿಂದ ಡಿಸೆಂಬರ್ 19ರವರೆಗೆ ನಡೆಯಲಿದೆ. ಮುಂಜಾನೆ 7ಕ್ಕೆ ಪ್ರಾರಂಭವಾದ ಮತದಾನ ಮಧ್ಯಾಹ್ನ 2 ಗಂಟೆಗೆ ಮುಕ್ತಾಯಗೊಳ್ಳಲಿದೆ. ಡಿಸೆಂಬರ್ 22ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಎಲ್ಲ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದನ್ನು ಓದಿ:ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ..!