ನವದೆಹಲಿ:ಕೊರೊನಾ ವೈರಸ್ನ ಹೊಸ ರೂಪಾಂತರಿ 'ಒಮಿಕ್ರೋನ್' ಎಲ್ಲೆಡೆ ಆತಂಕ ಸೃಷ್ಟಿಸಿದ್ದು, ರಾಷ್ಟ್ರ ರಾಜಧಾನಿ ಕೂಡ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಂದು ಈ ಬಗ್ಗೆ ಚರ್ಚಿಸಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (DDMA) ಸಭೆ ಕರೆದಿದೆ.
ನಾಗರಿಕ ವಿಮಾನಯಾನ ಸಚಿವಾಲಯದ ತಜ್ಞರು ಮತ್ತು ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಅಂತಾರಾಷ್ಟ್ರೀಯ ವಿಮಾನಗಳಲ್ಲಿ ದೆಹಲಿಗೆ ಬಂದಿಳಿಯುವ ಎಲ್ಲಾ ಪ್ರಯಾಣಿಕರನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸುವುದು ಹಾಗೂ ಒಮಿಕ್ರೋನ್ ವರದಿಯಾಗಿರುವ ದಕ್ಷಿಣ ಆಫ್ರಿಕಾ, ಬ್ರಿಟನ್, ಬೋಟ್ಸ್‌ವಾನಾ, ಜಿಂಬಾಬ್ವೆ, ಹಾಂಕಾಂಗ್, ಬೆಲ್ಜಿಯಂ ಮತ್ತು ಇಸ್ರೇಲ್ ದೇಶಗಳಿಂದ ದೆಹಲಿಗೆ ಬಂದಿಳಿಯುವ ಪ್ರಯಾಣಿಕರನ್ನು ಕ್ವಾರಂಟೈನ್ಗೆ ಒಳಪಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.