ನವದೆಹಲಿ: ಈಶಾನ್ಯ ದೆಹಲಿಯ ಜಾಫ್ರಾಬಾದ್ ಪ್ರದೇಶದ ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆಯಾಗಿದೆ. ಇದರಲ್ಲಿ ಓರ್ವ ವ್ಯಕ್ತಿ, ಆತನ ಪತ್ನಿ ಹಾಗೂ ಆತನ ಇಬ್ಬರು ಮಕ್ಕಳು ಸೇರಿದ್ದಾರೆ. ಕ್ಷೇತ್ರದ ಮಟ್ಕಾ ವಾಲಿ ಗಲ್ಲಿಯಲ್ಲಿ ಈ ಘಟನೆ ನಡೆದಿದೆ. ಮಾಹಿತಿ ಪಡೆದ ತಕ್ಷಣ ಜಾಫ್ರಾಬಾದ್ ಪೊಲೀಸ್ ಠಾಣೆಯ ತಂಡ ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದೆ.
ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆ: ಕಾರಣ ನಿಗೂಢ - ಈಶಾನ್ಯ ದೆಹಲಿಯ ಜಾಫ್ರಾಬಾದ್ ಪ್ರದೇಶದ ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆಯಾಗಿದೆ
ಜಾಫ್ರಾಬಾದ್ ಪ್ರದೇಶದ ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆಯಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆ: ಕಾರಣ ನಿಗೂಢ
ವಿಷಯದ ಗಂಭೀರತೆಯ ದೃಷ್ಟಿಯಿಂದ, ಈಶಾನ್ಯ ಜಿಲ್ಲಾ ಪೊಲೀಸ್‌ನ ಉನ್ನತ ಅಧಿಕಾರಿಗಳು ಸಹ ಸ್ಥಳದಲ್ಲಿ ಹಾಜರಿದ್ದು, ಸಂಪೂರ್ಣ ಘಟನೆಯನ್ನು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಕ್ರೈಂ ತಂಡವನ್ನು ಕರೆಸಿ ತನಿಖೆ ನಡೆಸಲಾಗಿದೆ. ಇಡೀ ಕುಟುಂಬ ಹೇಗೆ ಸಾವಿಗೀಡಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ಜನರು ಜಮಾಯಿಸಿದ್ದಾರೆ.
ಇದನ್ನೂ ಓದಿ:ಮದುವೆಗೆ ಅಡ್ಡಿ ಆಗಲೇ ಇಲ್ಲ ಪ್ರವಾಹ: ಜೀವ ಪಣಕ್ಕಿಟ್ಟು ಜೀವನ ಸಂಗಾತಿಗಾಗಿ ಥರ್ಮಾಕೋಲ್ನಲ್ಲೇ ವಧುವಿನ ಮನೆ ತಲುಪಿದ ವರ!