ನವದೆಹಲಿ:ಮೃತಪಟ್ಟ ವೃದ್ಧರೊಬ್ಬರ ಅಂತ್ಯಕ್ರಿಯೆ ಸಂದರ್ಭದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಅಂತಿಮ ವಿಧಿವಿಧಾನ ನೆರವೇರಿಸುವಾಗ ತಾತ ದಿಢೀರ್ ಕಣ್ತೆರೆದು ಮಾತನಾಡಿರುವ ವಿಚಿತ್ರ ಘಟನೆಗೆ ರಾಷ್ಟ್ರ ರಾಜಧಾನಿ ದೆಹಲಿ ಸಾಕ್ಷಿಯಾಗಿದೆ.
ಕ್ಯಾನ್ಸರ್ನಿಂದ ಬಳಲುತ್ತಿದ್ದ ಸತೀಶ್ ಭಾರದ್ವಾಜ್ (62) ಎಂಬ ವೃದ್ಧನನ್ನು ದೆಹಲಿಯ ಪ್ರಸಿದ್ಧ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಭಾನುವಾರ ಬೆಳಗ್ಗೆ ಇವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಬಳಿಕ ಮೃತನ ಕುಟುಂಬ ಸದಸ್ಯರು ಅಂತ್ಯಕ್ರಿಯೆ ಮಾಡಲು ಟಿಕ್ರಿ ಖುರ್ದ್ ಪ್ರದೇಶದಲ್ಲಿರುವ ಸ್ಮಶಾನಕ್ಕೆ ತೆರಳಿದ್ದಾರೆ.