ಕರ್ನಾಟಕ

karnataka

ETV Bharat / bharat

ಕಸ್ಟಡಿಯಲ್ಲಿದ್ದ ಯುವಕನ ಸಾವು: ಸಂಬಂಧಿಕರಿಂದ ಪ್ರತಿಭಟನೆ

ಆಸ್ಪತ್ರೆಯಲ್ಲಿ ಕೋವಿಡ್ 19 ಪರೀಕ್ಷೆಗೆ ಒಳಗಾಗುವಾಗ ಯುವಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಆತನ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಆತ ತೀರಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಸ್ಟಡಿಯಲ್ಲಿದ್ದ ಯುವಕನ ಸಾವು: ಸಂಬಂಧಿಕರಿಂದ ಪ್ರತಿಭಟನೆ
Death of a youth in police custody triggers uproar in Prayagraj

By

Published : Nov 4, 2022, 3:42 PM IST

ಪ್ರಯಾಗರಾಜ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ದಿನಸಿ ಅಂಗಡಿಯ ಮಾಲೀಕನೊಬ್ಬ ಸಾವನ್ನಪ್ಪಿದ ಘಟನೆ ಕೋಲಾಹಲಕ್ಕೆ ಕಾರಣವಾಗಿದೆ. ಯುವಕ ಸಾವಿಗೀಡಾದ ಆಸ್ಪತ್ರೆಯ ಮುಂದೆ ಮೃತನ ಸಂಬಂಧಿಕರು ಗಲಾಟೆ ಮಾಡಿದ್ದಾರೆ. ಕಸ್ಟಡಿಯಲ್ಲಿದ್ದ ಯುವಕನ ಸಾವಿಗೆ ಪೊಲೀಸರೇ ಕಾರಣ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ.

ಆಸ್ಪತ್ರೆಯಲ್ಲಿ ಕೋವಿಡ್ -19 ಪರೀಕ್ಷೆಗೆ ಒಳಗಾಗುವಾಗ ಯುವಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಆತನ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಆತ ತೀರಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮಾತನಾಡಿದ ನಗರ ಎಸ್‌ಪಿ ಸಂತೋಷ್ ಕುಮಾರ್ ಮೀನಾ, ಪಟ್ಟಣದ ದಾರಗಂಜ್ ಪ್ರದೇಶದಲ್ಲಿ ರಸ್ತೆಗೆ ಸಂಬಂಧಿಸಿದಂತೆ ಗಲಾಟೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ಗಲಾಟೆಯಲ್ಲಿ ಭಾಗಿಯಾಗಿದ್ದ ಲೋಕೇಶ್ ಶರ್ಮಾ ಎಂಬ ವ್ಯಕ್ತಿಯನ್ನು ಬಂಧಿಸಿ ಆತನ ಮೇಲೆ ಸೆಕ್ಷನ್ 151 ಮತ್ತು 116 ರ ಅಡಿ ಪ್ರಕರಣ ದಾಖಲಿಸಲಾಗಿತ್ತು.

ಶರ್ಮಾ ಅವರನ್ನು ಕೋವಿಡ್ -19 ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದಾಗಿ ಸ್ವಲ್ಪ ಸಮಯದ ನಂತರ ಆತ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ನಿಧನರಾದರು. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೇವೆ ಮತ್ತು ಇತರ ಕಾನೂನು ಪ್ರಕ್ರಿಯೆಗಳು ನಡೆಯಲಿವೆ ಎಂದು ಹೇಳಿದರು.

ಇದನ್ನು ಓದಿ:ಚಿತ್ರದುರ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ...

ABOUT THE AUTHOR

...view details