ಕರ್ನಾಟಕ

karnataka

ETV Bharat / bharat

ತಮಿಳುನಾಡು ಪಟಾಕಿ ದುರಂತ: ಮೃತರ ಸಂಖ್ಯೆ 19ಕ್ಕೆ ಏರಿಕೆ - ಪಿಎಂ ನರೇಂದ್ರ ಮೋದಿ

ಮತ್ತೆ 8 ಕಾರ್ಮಿಕರು ಮೃತಪಟ್ಟಿದ್ದು, ತಮಿಳುನಾಡಿನ ಪಟಾಕಿ ಕಾರ್ಖಾನೆ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಹೆಚ್ಚಳವಾಗಿದೆ.

blast at firecracker factory in Virudhunagar
ತಮಿಳುನಾಡು ದುರಂತ

By

Published : Feb 13, 2021, 9:56 AM IST

Updated : Feb 13, 2021, 2:13 PM IST

ವಿರುಧುನಗರ್: ತಮಿಳುನಾಡಿನ ವಿರುಧುನಗರ್ ಜಿಲ್ಲೆಯಲ್ಲಿ ನಿನ್ನೆ ಸಂಭವಿಸಿದ ಪಟಾಕಿ ಕಾರ್ಖಾನೆ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ

ವಿರುಧುನಗರದ ಸತೂರ್​ ಪ್ರದೇಶದಲ್ಲಿನ ಅಚಂಕುಲಂ ಗ್ರಾಮದಲ್ಲಿರುವ ಮರಿಯಮ್ಮಲ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವಾಗಿತ್ತು. ನಿನ್ನೆ 11 ಕಾರ್ಮಿಕರು ಮೃತಪಟ್ಟಿದ್ದು, ಹಲವರ ಸ್ಥಿತಿ ಗಂಭೀರವಾಗಿತ್ತು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ಮಂದಿ ಪ್ರಾಣತೆತ್ತಿದ್ದಾರೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ಕಾರಿನಲ್ಲೇ ಸಿಲುಕಿ ಪ್ರಾಣತೆತ್ತ ಆರು ಜನ!

ಪಿಎಂ, ಸಿಎಂರಿಂದ ಪರಿಹಾರ ಘೋಷಣೆ

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಪ್ರತಿ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಪಿಎಂ ನರೇಂದ್ರ ಮೋದಿ ಘೋಷಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಮೃತರ ಕುಟುಂಬಕ್ಕೆ 3 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

Last Updated : Feb 13, 2021, 2:13 PM IST

ABOUT THE AUTHOR

...view details