ಮುಂಬೈ:ಡಿಸೆಂಬರ್ 6 ರಂದು ಮಹಾರಾಷ್ಟ್ರದ ಮುಂಬೈನ ಲಾಲ್‌ಬಾಗ್ ಪ್ರದೇಶದಲ್ಲಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ಬಲಿಯಾದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದು, 9 ಮಂದಿಯ ಸ್ಥಿತಿ ಚಿಂತಾಜನಕವಾಗಿತ್ತು. ಅವಘಡ ನಡೆದ ದಿನದಂದೇ ಇಬ್ಬರು ಸಾವನ್ನಪ್ಪಿದ್ದರು. ಗಾಯಾಳುಗಳನ್ನು ಮುಂಬೈನ ಮಸಿನಾ ಆಸ್ಪತ್ರೆ ಹಾಗೂ ಕೆಇಎಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ಓದಿ:ಮುಂಬೈನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ: ಓರ್ವ ಮಹಿಳೆ ಸಾವು, 9 ಜನರ ಸ್ಥಿತಿ ಚಿಂತಾಜನಕ
ಕೆಇಎಂ ಆಸ್ಪತ್ರೆಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಮೂವರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು. ಮಸಿನಾ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 50 ವರ್ಷದ ಬಿಪಿನ್ ಎಂಬವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾದಂತಾಗಿದೆ ಎಂದು ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಮಾಹಿತಿ ನೀಡಿದೆ. ಸದ್ಯಕ್ಕೆ ಓರ್ವನ ಸ್ಥಿತಿ ಗಂಭೀರವಾಗಿದ್ದು, ಮೂವರ ಆರೋಗ್ಯ ಸ್ಥಿರವಾಗಿದೆ.