ನವದೆಹಲಿ:ಇಲ್ಲಿನ ಅಪಾರ್ಟ್ಮೆಂಟ್ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಎರಡು ಕಾರುಗಳು ಮತ್ತು 13 ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ, ಈ ಅಗ್ನಿ ಅವಘಡದಿಂದ ಐವರನ್ನು ರಕ್ಷಿಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ದೆಹಲಿಯ ರಾಜ್ ನಗರ ಭಾಗ-II ಪ್ರದೇಶದ ವೈಷ್ಣವಿ ಅಪಾರ್ಟ್ಮೆಂಟ್ನಲ್ಲಿ ಅಗ್ನಿ ಅವಘಡ ನಡೆದಿದೆ ಎಂದು ತಿಳಿದು ಬಂದಿದೆ. ಉಸಿರಾಟದ ತೊಂದರೆಯಿಂದ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನೆ ಬಗ್ಗೆ ಮಾತನಾಡಿರುವ ದೆಹಲಿಯ ಅಗ್ನಿಶಾಮಕ ಸೇವೆ (ಡಿಎಫ್ಎಸ್) ಮುಖ್ಯಸ್ಥ ಅತುಲ್ ಗರ್ಗ್, ಮೈದಾನ ಮತ್ತು ನಾಲ್ಕು ಅಂತಸ್ತಿನ ವಸತಿ ಕಟ್ಟಡದಲ್ಲಿ ಸ್ಫೋಟ ಸಂಭವಿಸಿದ್ದರಿಂದ ಈ ದುರಂತ ಸಂಭವಿಸಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಒಟ್ಟು 15 ಅಗ್ನಿಶಾಮಕ ವಾಹನಗಳನ್ನು ರವಾನೆ ಮಾಡಲಾಗಿತ್ತು. ತಕ್ಷಣಕ್ಕೆ ಎಲ್ಲವನ್ನು ತಹಬದಿಗೆ ತರಲಾಗಿದೆ. ಗುರುವಾರ ಬೆಳಗಿನ ಜಾವ 2.47 ಗಂಟೆ ಸುಮಾರಿಗೆ ಈ ಬೆಂಕಿ ಕಾಣಿಸಿಕೊಂಡಿತ್ತು.
"ಬೆಂಕಿಯು ನೆಲ ಮಹಡಿಯಲ್ಲಿ ಈ ಬೆಂಕಿ ಕಾಣಿಸಿಕೊಂಡಿದ್ದರಿಂದ ಅಲ್ಲಿ ನಿಲ್ಲಿಸಲಾಗಿದ್ದ ಕಾರುಗಳು ಮತ್ತು ಬೈಕ್ಗಳಿಗೆ ಬೆಂಕಿ ತಗುಲಿ ಅವೆಲ್ಲ ಸುಟ್ಟು ಕರಕಲಾಗಿವೆ. ಪಾರ್ಕಿಂಗ್ ಜಾಗದಲ್ಲೇ ಬೆಂಕಿ ಹೊತ್ತಿಕೊಂಡಿದ್ದರಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.